ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬುಧವಾರ ಬೆಂಗಳೂರಿನಲ್ಲಿ ಗದಗ ಜಿಲ್ಲೆಯ ಬಿಜೆಪಿ ಮುಖಂಡರು ಭೇಟಿ ಮಾಡಿ ಸನ್ಮಾನಿಸಿದರು. ಇದೇ ವೇಳೆ ಬಿಜಾಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವೈನ್ ಪಾರ್ಕ್‌ಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಕಾಂತಿಲಾಲ್ ಬನ್ಸಾಲಿ, ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಅನಿಲ್ ಮೆಣಸಿನಕಾಯಿ, ಕರ್ನಾಟಕ ದ್ರಾಕ್ಷಾರಸ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಸೋಮು, ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಪ್ರಶಾಂತ ನಾಯ್ಕರ್, ಅನಿಲ್ ಅಬ್ಬಿಗೇರಿ, ಭದ್ರೇಶ್ ಕುಸ್ಲಾಪುರ ಉಪಸ್ಥಿತರಿದ್ದರು.
