ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ; 5 ದಿನಗಳ ಉತ್ಸವಕ್ಕೆ ಮಾತ್ರ ಅವಕಾಶ

0
Spread the love

ಕೊರೊನಾ ಪಾಸಿಟಿವಿಟಿ ದರ ಶೆ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಅವಕಾಶ ಇಲ್ಲ.
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಸಾರ್ವಜನಿಕರ ಒತ್ತಡಕ್ಕೆ ಮಣಿದ ಸರ್ಕಾರ ಕೊನೆಗೂ ಸಾರ್ವಜನಿಕ ಗಣೇಶೋತ್ಸವಕ್ಕೆ ಹಲವು ಷರತ್ತುಗಳನ್ನು ವಿಧಿಸಿ ಅನುಮತಿ ನೀಡಿದೆ.
ಸಿಎಂ ನೇತೃತ್ವದಲ್ಲಿ ಗಣೇಶ ಉತ್ಸವದ ಬಗ್ಗೆ ಇಂದು ನಡೆದ ಸಭೆಯ ಬಳಿಕ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಆರ್. ಅಶೋಕ್, ಕಳೆದ ಬಾರಿಯ ಪರಿಸ್ಥಿತಿ ನೋಡಿದಾಗ ಈ ಬಾರಿ ಸ್ವಲ್ಪಮಟ್ಟಿಗೆ ಪರವಾಗಿಲ್ಲ. ಕೊರೊನಾ ಕಡಿಮೆಯಾಗಿದ್ದರೂ ಸಂಪೂರ್ಣ ಹೋಗಿಲ್ಲ. ತಜ್ಞರು ಈ ತಿಂಗಳಲ್ಲಿ ಮೂರನೇ ಅಲೆಯ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಎಚ್ಚರಿಕೆ ಹೆಜ್ಜೆ ಇಡಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದರು.
ಐದು ದಿನಗಳ ಗಣೇಶೋತ್ಸವಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ನಗರ ಪ್ರದೇಶಗಳಲ್ಲಿ ವಾರ್ಡ್ ಗೆ ಒಂದು, ಹಳ್ಳಿಗಳಲ್ಲಿ ಒಂದು ಇಲ್ಲವೆ, ಸ್ಥಳೀಯ ಆಡಳಿತ ಅನುಮತಿಯೊಂದಿಗೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು.
ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆಗೆ ಪೊಲೀಸರ ಅನುಮತಿ ಕಡ್ಡಾಯವಾಗಿದೆ. ಮೂರ್ತಿ ಪ್ರತಿಷ್ಠಾಪಿಸಿದ ಸ್ಥಳಗಳಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ, ಅನ್ನಸಂರ್ಪಣೆ ನಡೆಸಲು ಅವಕಾಶ ಇರೋದಿಲ್ಲ. 50×50 ಅಡಿ ಅಳತೆಯ ಪೆಂಡಾಲ್ ಹಾಕಲು ಅವಕಾಶ ನೀಡಲಾಗಿದೆ.
ಅಪಾರ್ಟ್ಮೆಂಟ್‌ಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶ ನೀಡಲಾಗಿದ್ದು, ಆದರೆ 20ಕ್ಕಿಂತ ಹೆಚ್ಚು ಜನ ಸೇರದಂತೆ ನಿರ್ಬಂಧ ವಿಧಿಸಲಾಗಿದೆ. ಡಿಜೆ ಅಥವಾ ಇತರ ಯಾವುದೇ ವಾದ್ಯಗಳನ್ನು ಬಳಸಲು ಅವಕಾಶ ಇಲ್ಲ.
ಗಣೇಶ ಮೂರ್ತಿ ಪ್ರತಿಷ್ಠಾನೆ ಮಂಡಳಿ ಸದಸ್ಯರಿಗೆ ಕೋವಿಡ್
ವ್ಯಾಕ್ಸಿನ್ ಕಡ್ಡಾಯವಾಗಿದೆ. ಆಯಾ ಸ್ಥಳೀಯ ಆಡಳಿತಗಳು ವ್ಯಾಕ್ಸಿನ್ ಹಾಕಲು ವ್ಯವಸ್ಥೆ ಮಾಡಬೇಕು. ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ನೀಡಲಾಗಿದ್ದು, ಆದರೆ, 20ಕ್ಕಿಂತ ಹೆಚ್ಚು ಜನರು ಮಾತ್ರ ಸೇರುವಂತಿಲ್ಲ.
ಗಡಿಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2ರಷ್ಟು ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಉತ್ಸವಕ್ಕೆ ಅವಕಾಶ ನೀಡಲಾಗಿದ್ದು, ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಆಚರಣೆಗೆ ಅವಕಾಶ ಇಲ್ಲ. ಶಾಲಾ ಕಾಲೇಜುಗಳಲ್ಲಿ ಗಣೇಶ ಪ್ರತಿಷ್ಠಾಪನೆ ನಿಷೇಧಿಸಲಾಗಿದೆ. ನಗರಗಳಲ್ಲಿ ನಿಗದಿತ ಸ್ಥಳಗಳಲ್ಲಿ, ಗ್ರಾಮೀಣ ಭಾಗದಲ್ಲಿ ಕೆರೆಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡಲು ಅವಕಾಶ ನೀಡಲಾಗಿದೆ.
ನೈಟ್ ಕರ್ಫ್ಯೂ ಜಾರಿಯಲ್ಲಿರುವುದರಿಂದ ರಾತ್ರಿ 9 ರಿಂದ ಬೆಳಗ್ಗೆ 5 ರವರೆಗೂ ಯಾವುದೇ ಚಟುವಟಿಕೆ ನಡೆಸುವಂತಿಲ್ಲ. ಪರಿಸರ ಪ್ರೇಮಿ ಗಣೇಶ ಮೂರ್ತಿ ಮಾತ್ರ ಕೂರಿಸಬೇಕು. ಇನ್ನುಳಿದಂತೆ ಪರಿಸರ ಪ್ರೇಮಿ ಮೂರ್ತಿಗಳ ಪ್ರತಿಷ್ಠಾಪನೆ, ಸಾರ್ವಜನಿಕ ಮೂರ್ತಿಗಳು 4 ಅಡಿ ಎತ್ತರ ಮೀರುವಂತಿಲ್ಲ ಮುಂತಾದ ಹಿಂದಿನ ನಿಯಮಗಳೂ ಅನ್ವಯವಾಗಲಿವೆ ಎಂದು ಹೇಳಿದ ಅವರು, ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

Advertisement

Spread the love

LEAVE A REPLY

Please enter your comment!
Please enter your name here