ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಸಾಲ ಕೊಡುವ ನೆಪದಲ್ಲಿ ಟೂರಿಸ್ಟ್ ಗೈಡ್ ಮತ್ತು ಟ್ರಾವೆಲ್ ಏಜೆಂಟ್ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದೆಹಲಿಯ ಫೈವ್‌ಸ್ಟಾರ್ ಹೋಟೆಲ್‌ನಲ್ಲಿ ನಡೆದಿದೆ. ಭಾನುವಾರ ಪ್ರಮುಖ ಆರೋಪಿಯನ್ನು ಬಂಧಿಸಿರುವ ದೆಹಲಿ ಪೊಲೀಸರು, ಒಟ್ಟು 6 ಆರೋಪಿಗಳು ಭಾಗಿಯಾಗಿದ್ದು, ಇದರಲ್ಲಿ ಒಬ್ಬ ಮಹಿಳೆಯೂ ಇದ್ದಾಳೆ ಎಂದಿದ್ದಾರೆ.
ಬಂಧಿತನನ್ನು ದೆಹಲಿಯ ಶೇಖ್ ಸರೈ ಪ್ರದೇಶದ ನಿವಾಸಿ ಮನೋಜ್ ಶರ್ಮಾ ಎಂದು ಗುರುತಿಸಲಾಗಿದೆ.
ದೆಹಲಿಯ ಇಂಡಿಯನ್ ಗೇಟ್ ಬಳಿ ಇರುವ ಫೈವ್ ಸ್ಟಾರ್ ಹೋಟೆಲ್ ಒಂದರ ರೂಮಿನಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಶನಿವಾರ ಸಂತ್ರಸ್ತೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸಂಭವಿಸಿದ್ದು ಹೇಗೆ?
ಮನೋಜ್ ಶರ್ಮಾ ಮತ್ತು ಇನ್ನೋರ್ವ ಆರೋಪಿ ಆ ಹೋಟೆಲ್‌ನಲ್ಲಿ ರೂಂ ಬುಕ್ ಮಾಡಿದ್ದರು. ಸಂತ್ರಸ್ತೆ ಟೂರಿಸ್ಟ್ ಗೈಡ್‌ಗೆ ಹಣದ ಅಗತ್ಯವಿತ್ತು. ಈ ಇಬ್ಬರು ಆರೋಪಿಗಳು ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ಮೊದಲೇ ಹೇಳಿದ್ದರು. ಸಾಲದ ವ್ಯವಸ್ಥೆಯಾಗಿದೆ ಎಂದು ಯುವತಿಯನ್ನು ರೂಮಿಗೆ ಕಡೆಸಿಕೊಂಡು ಅತ್ಯಾಚಾರ ಮಾಡಲಾಗಿದೆ. ಯುವತಿ ಆರು ಆರೋಪಿಗಳಿದ್ದರು ಎಂದು ಹೇಳಿದ್ದು, ಇದರಲ್ಲಿ ಮಹಿಳೆಯೂ ಒಬ್ಬರು ಭಾಗಿಯಾಗಿದ್ದಾರೆ. ಪೊಲೀಸರು ಉಳಿದ ಆರೋಪಿಗಳ ತಲಾಶ್‌ನಲ್ಲಿದ್ದಾರೆ.