ಸೋಂಕಿತರ ಸಾವಿಗೆ ಸರಕಾರದ ನಿರ್ಲಕ್ಷ್ಯವೇ ಕಾರಣ; ದೊಡ್ಡಮನಿ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ

Advertisement

ಸೋಮವಾರ ಮುಂಡರಗಿ ತಾಲೂಕು ಆಸ್ಪತ್ರೆಯಲ್ಲಿ ನಾಲ್ಕು ಜನ ಕೋವಿಡ್ ಸೋಂಕಿತರು ಆಕ್ಸಿಜನ್ ಇಲ್ಲದೆ ಮೃತಪಟ್ಟಿರುವುದು ಅತ್ಯಂತ ವಿಷಾದನೀಯ ವಾಗಿದ್ದು, ಇದಕ್ಕಾಗಿ ಸರಕಾರ ಅಗತ್ಯ ಮುಂಜಾಗ್ರತೆ ವಹಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ‌ ಆರೋಪಿಸಿದ್ದಾರೆ.

ತಜ್ಞರು ಅಗತ್ಯ ಬೆಡ್ ಹಾಗೂ ಆಕ್ಸಿಜನ್ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಹೇಳಿದರೂ ಸಹ ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸದೇ ಇರುವುದರಿಂದ ಇಂತಹ ಅವಘಡಗಳು ಸಂಭವಿಸುತ್ತಿವೆ ಎಂದು ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೋವಿಡ್ ನಿಯಂತ್ರಣಕ್ಕಾಗಿ ಏಕಾಏಕಿ ಸರಕಾರ ಲಾಕ್ಡೌನ್ ಹೇರಿರುವುದರಿಂದ ಅಸಂಘಟಿತ ಕೂಲಿ ಕಾರ್ಮಿಕರು ಜೀವನ ನಡೆಸುವುದು ಅತಿ ಕಷ್ಟಕರವಾಗಿದ್ದು, ಕೂಡಲೇ ಸರಕಾರ ನೆರವಿಗೆ ಬರುವುದರ ಮೂಲಕ ಪ್ರತಿ ಕುಟುಂಬಕ್ಕೆ ತಲಾ 10 ಕೆಜಿ ಅಕ್ಕಿ, ಪ್ರತಿ ತಿಂಗಳು 10ಸಾವಿರ ರೂ,ಗಖ ಸಹಾಯಧನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ಜನತೆ ದಂಗೆ ಏಳುವ ಮೊದಲೇ ಸರಕಾರ ಸೂಕ್ತ ಪರಿಹಾರ ನೀಡಲು ಮುಂದಾಗಬೇಕು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು. ಇಂತಹ ಅವಘಡಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ರಾಮಕೃಷ್ಣ ದೊಡ್ಡಮನಿ ಸರಕಾರಕ್ಕೆ ಕಿವಿ ಮಾತು ಹೇಳಿದರು.


Spread the love

LEAVE A REPLY

Please enter your comment!
Please enter your name here