ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಇದರಲ್ಲಿ ಅಲೆಮಾರಿ ಹಾಗೂ ಕಡು ಬಡತನದಿಂದ ಕುಡಿದ ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರಿಗೆ ಯಾವುದೇ ಪ್ಯಾಕೇಜ್ ಘೋಷಣೆ ಮಾಡದೇ ಅನ್ಯಾಯ ಮಾಡಿದೆ ಎಂದು ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ವರ್ಷ ಘೋಷಿಸಿದ ಪ್ಯಾಕೇಜ್ ನಿಂದಲೂ ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರಿಗೆ ಯಾವುದೇ ಪ್ಯಾಕೇಜ್ ಘೋಷಿಸಿದ ಸರಕಾರ ಈ ಭಾರಿಯು ಅದೇ ಸಂಪ್ರದಾಯ ಮುಂದುವರಿಸಿ ಕೊಂಡು ಬಂದಿದೆ.
ಪ್ರತಿಪಕ್ಷಗಳ ಹಾಗೂ ಸಾರ್ವಜನಿಕ ಒತ್ತಡದ ಮೇರೆಗೆ ಸರ್ಕಾರವು ಒಲ್ಲದ ಮನಸ್ಸಿನಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರು ಹಾಗೂ ಬಿ.ಪಿ.ಎಲ್.ಕುಟುಂಬಗಳನ್ನು ಗುರುತಿಸಿ ಅವರ ಬ್ಯಾಂಕ್ ಖಾತೆಗೆ ಸರ್ಕಾರದಿಂದ ನೇರವಾಗಿ ಆರ್ಥಿಕ ಸಹಾಯ ಮಾಡುವುದರಿಂದ ರಾಜ್ಯದ ಕೋಟ್ಯಾಂತರ ಬಡ ಜನರಿಗೆ ಉಪಯೋಗವಾಗಬಹುದು, ಆದರೆ ಸರ್ಕಾರವು ಇದರ ಬಗ್ಗೆ ಗಮನ ಹರಿಸಿಲ್ಲ.
ರಾಜ್ಯದಾದ್ಯಂತ ಸಾವಿರಾರು ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರು ಅದೇ ವೃತ್ತಿಯನ್ನು ನಂಬಿ ದುಡಿಯುತ್ತಿದ್ದಾರೆ.ಆದರೆ, ಅವರಿಗೆ ಹಾಸಿಗೆ ಹೊಲೆಯುವ ಕೂಲಿ ಬಿಟ್ಟು ಯಾವುದೇ ಕೆಲಸ ಗೊತ್ತಿಲ್ಲ ಎಂದರು
ಇದರಿಂದಾಗಿ ಅವರು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಕೋವಿಡ್–19 ಲಾಕ್‌ಡೌನ್ ಪರಿಸ್ಥಿತಿಯಿಂದಾಗಿ ಕೆಲಸವಿಲ್ಲದೆ ಮತ್ತು ಬದುಕು ಸಾಗಿಸಲು ಕಷ್ಟಸಾಧ್ಯವಾಗಿ ಕೆಲವರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯಲ್ಲಿ ಇದ್ದಾರೆ. ಹೀಗಾಗಿ ಅವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಸರ್ಕಾರದಿಂದ ದೊರೆಯುವ ಶಾಸನಬದ್ಧ ಸೌಲಭ್ಯಗಳನ್ನು ಕಲ್ಪಿಸಬೇಕೆಂದರು.
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಮಾದರಿಯಲ್ಲಿ ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರಿಗೂ ಕಾರ್ಮಿಕರೆಂದು ಗುರುತಿನ ಚೀಟಿ ನೀಡಬೇಕು ಎಂದು ಮಹಾಮಂಡಳ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ಆಗ್ರಹಿಸಿದರು.