ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಸರ್ಕಾರ ಮತ್ತು ಆಡಳಿತದ ವ್ಯವ್ಯಸ್ಥೆ ಮೇಲೆ ವಿನಾಕಾರಣ ಆರೋಪ ಮಾಡುತ್ತಲೆ ದಿನದೂಡುತ್ತಿರುವ ಮಾಜಿ ಸಚಿವ ಹೆಚ್. ವಿಶ್ವನಾಥ್ ಈ ಹಿಂದಿನ (ಕಾಂಗ್ರೆಸ್) ಸರ್ಕಾರದ ಮಾನಸಿಕತೆಯಿಂದ ಹೊರ ಬಂದಿಲ್ಲವೆಂದು ಕಾಣುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕುಟುಕಿದರು.
ಹೆಚ್ ವಿಶ್ವನಾಥ್ ವಿರುದ್ಧ ಗುಡುಗಿದ ಬಿ.ವೈ.ವಿಜಯೇಂದ್ರ,
ಅಂಜನಾದ್ರಿ ಪರ್ವತದಿಂದ ಕಾರಟಗಿ ತೆರಳುವ ಮಾರ್ಗ ಮಧ್ಯೆ ಗಂಗಾವತಿ ಶಾಸಕ ಪರಣ್ಣ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬಹುತೇಕ ಎಲ್ಲ ಕೆಲಸಕ್ಕೆ ಹಣ ನೀಡಬೇಕಾದ ಸ್ಥಿತಿಯಿದೆ ಆದರೆ ವಿಶ್ವನಾಥ್ ನವರು ವಿನಾಕಾರಣ ಟೀಕೆ ಮಾಡ್ತಾ ಇದ್ದಾರೆ.
ಅವರಿಗೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಅವರು ಸಚಿವರಿದ್ದಾಗ ಮಾಡಿದ ಕೆಲಸ ಹಾಗೂ ಆ ಮನಸ್ಥಿತಿಯಿಂದ ಇನ್ನು ವಿಶ್ವನಾಥ್ ಹೊರ ಬಂದಂತೆ ಕಾಣುತ್ತಿಲ್ಲ. ಸರ್ಕಾರದಲ್ಲಿ ಏನು ನಡೆಯತ್ತಿದೆ ಎಂಬುವುದರ ಬಗ್ಗೆ ಅವರಿಗೆ ಮಾಹಿತಿ ಕೊರತೆ ಇದ್ದಂತೆ ಕಾಣುತ್ತದೆ. ಮೈಸೂರು ಬಿಟ್ಟು ರಾಜ್ಯದ ನಾನಾ ಕಡೆಗಳಲ್ಲಿ ಪ್ರವಾಸ ಮಾಡಿದರೆ ಅವರಿಗೆ ರಾಜ್ಯದಲ್ಲಿ ಅಭಿವೃದ್ಧಿ ಹೇಗಾಗುತ್ತಿದೆ ಎಂಬ ಮಾಹಿತಿ ಸಿಗಲಿದೆ ಎಂದರು.
ಸಚಿವ ಸಂಪುಟದಲ್ಲಿ ಕೊಪ್ಪಳ ಜಿಲ್ಲೆಗೆ ಆದ್ಯತೆ ಇಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಶ್ರಮದಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ. ಇರುವ ಇತಿಮಿತಿಯಲ್ಲಿ ಸಿಎಂ ಕೆಲಸ ಮಾಡುತ್ತಿದ್ದಾರೆ. ಅವರ ಆಡಳಿತದಲ್ಲಿ ಜಿಲ್ಲೆಗೆ ಆದ್ಯತೆ ನೀಡಲು ಪ್ರಯತ್ನಿಸುತ್ತಾರೆ ಎಂದರು