ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭಾಶಯ ಕೋರಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ. ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು ಎಂದು ಸರಳ ಸಂದೇಶವನ್ನು ಅವರು ಟ್ವೀಟ್ ಮಾಡಿದ್ದಾರೆ.

ಕಳೆದ ಸಲ 69ನೇ ಜನ್ಮದಿನದಂದು ರಾಹುಲ್ ಮುಖತಃ ವಿಶ್ ಮಾಡಿದ್ದರು. ಈಗ ಅವರು ಸೋನಿಯಾರ ಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಿದ್ದಾರೆ.
ಇತ್ತೀಚಿನ ತಿಂಗಳುಗಳಲ್ಲಿ ಪ್ರತಿದಿನವೂ ಸರಣಿ ಟ್ವೀಟ್‌ಗಳ ಮೂಲಕ ಮೋದಿಯವರ ಕೊರೋನಾ ನಿರ್ವಹಣೆಯ ವಿಫಲತೆ, ಆರ್ಥಿಕತೆ ಹಿನ್ನಡೆ ವಿಷಯಗಳ ಕುರಿತು ರಾಹುಲ್ ಟೀಕೆ ಮಾಡುತ್ತಲೇ ಬಂದಿದ್ದಾರೆ.