ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ
ಮನೆಯಲ್ಲಿದ್ದ ಅಡುಗೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿಹೊತ್ತಿಕೊಂಡು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೋಮವ್ವ ಶೇಖಪ್ಪ ಲಮಾಣಿ ಎಂಬುವವರ ಮನೆಯ ಸಿಲಿಂಡರ್ ಸೋರಿಕೆಯಾಗಿ ಬೆಂಕಿಹೊತ್ತಿಕೊಂಡಿದ್ದು, ಅಡುಗೆ ಮಾಡುತ್ತಿದ್ದ ಸೋಮವ್ವಳ ಹಾಗೂ ಮಗುವಿಗೆ ಸುಟ್ಟ ಗಾಯಗಳಾಗಿವೆ. ಸ್ಥಳೀಯರು ನೀರು ಸುರಿದು ಬೆಂಕಿ ನಂದಿಸಿದ್ದಾರೆ.
ಬೆಂಕಿಯಿಂದಾಗಿ ಸಿಲಿಂಡರ್ ಸ್ಪೋಟಗೊಳ್ಳುವ ಆತಂಕ ಇತ್ತು. ಆದರೆ, ಅದೃಷ್ಟವಶಾತ್ ಅವಘಡ ತಪ್ಪಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



