ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ:
ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗಿಂತ ರಾಜ್ಯದಲ್ಲಿರುವ ನಾವ್ಯಾರು ದೊಡ್ಡವರಲ್ಲ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಸೋಮವಾರ (ನ.29) ಶಿರಹಟ್ಟಿ ತಾಲೂಕಿನ ವರವಿ ಗ್ರಾಮದಲ್ಲಿ ಸಚಿವ ಮುರುಗೇಶ್ ನಿರಾಣಿ ಅವರು ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂಬ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು.
ರಾಷ್ಟ್ರಾಧ್ಯರಾಗಿ ಸೇವೆ ಸಲ್ಲಿಸಿದ ಅಮಿತ್ ಶಾ ಹಾಗೂ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಬಸವರಾಜ್ ಬೊಮ್ಮಾಯಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದು, ಅದರಂತೆ ಶಾಸಕಾಂಗ ಪಕ್ಷದ ಸರ್ವ ಸದಸ್ಯರು ಒಕ್ಕೋರಲಿನಿಂದ ಒಪ್ಪಿಗೆ ಸೂಚಿಸಿದ್ದೇವೆ ಎಂದರು.
ಅದರಂತೆ, ಇತ್ತೀಚಿಗೆ ದಾವಣಗೆರೆಯ ಕಾರ್ಯಕ್ರಮವೊಂದರಲ್ಲಿ ಬೊಮ್ಮಾಯಿ ಅವರೇ ಇನ್ನುಳಿದ ಅವಧಿಗೆ ಸಿಎಂ ಆಗಿ ಮುಂದುವರೆಯಲಿದ್ದು, ಮುಂಬರುವ ವಿಧಾನಸಭಾ ಚುನಾವಣೆ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಅಭಯ ನೀಡಿದ್ದಾರೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.