ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಹೇಳಿಕೆ
ವಿಜಯಸಾಕ್ಷಿ ಸುದ್ದಿ, ಮೈಸೂರು
ಬಸವರಾಜ ಬೊಮ್ಮಾಯಿ ಚಾಣಾಕ್ಷ ರಾಜಕಾರಣಿ. ಗೃಹ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಎಲ್ಲವನ್ನೂ ಚೆನ್ನಾಗಿ ನಡೆಸಿಕೊಂಡು ಹೋಗಲಿದ್ದಾರೆ ಎಂದು ಮೈಸೂರ ಸಂಸದ ಪ್ರತಾಪಸಿಂಹ ಹೇಳಿದರು.
ಸಿಎಂ ಬೊಮ್ಮಾಯಿ ಕೇಂದ್ರದ ಬಳಿ ರಾಜ್ಯದ ಪಾಲು ಕೇಳಲಾರರು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ಬಸವರಾಜ ಬೊಮ್ಮಾಯಿಯವರು ಮನೆಯಲ್ಲಿದ್ದುಕೊಂಡೇ ಅಧಿಕಾರ ನಡೆಸುವುದನ್ನು ಕಂಡಿದ್ದಾರೆ. ಸಿದ್ದರಾಮಯ್ಯನವರು 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಅವರಿಗೆ ಎಲ್ಲವೂ ಗೊತ್ತು.
ಹೈವೆ ಕೆಲಸಕ್ಕೆ 95 ಸಾವಿರ ಕೋಟಿ ಹಣ ಕೊಟ್ಟಿರುವುದು ಮೋದಿ ಸರ್ಕಾರ. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 8,096 ಕೋಟಿ ಹಣ ಕೊಟ್ಟಿದೆ. ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡುತ್ತಿರುವುದು ಮೋದಿ ಸರ್ಕಾರ. ರಾಜ್ಯಕ್ಕೆ ಅಗತ್ಯವಾದ ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಾ ಬಂದಿದೆ. ಸಿದ್ದರಾಮಯ್ಯ ಅವರು ಕೇವಲ ರಾಜಕೀಯಕ್ಕಾಗಿ ಮಾತನಾಡುವುದನ್ನು ಬಿಡಬೇಕು ಎಂದು ಆಗ್ರಹಿಸಿದರು.
ಅಣ್ಣಾಮಲೈ ಉಪವಾಸ ಚರ್ಚೆ ಅನಗತ್ಯ
ಅಣ್ಣಾಮಲೈ ಅಲ್ಲಿನ ರಾಜಕೀಯಕ್ಕಾಗಿ ಉಪವಾಸ ಮಾಡ್ತಿದ್ದಾರೆ. ಅದರ ಬಗ್ಗೆ ನಮ್ಮಲ್ಲಿ ಹೆಚ್ಚು ಚರ್ಚೆ ಬೇಡ. ನಮ್ಮ ರಾಜಕಾರಣಿಗಳು ಹೇಳಿಕೆ ಕೊಡುವುದನ್ನ ಬಿಟ್ಟು ಡಿಪಿಆರ್ ರೆಡಿ ಮಾಡಲು ಒತ್ತು ನೀಡಬೇಕು ಎಂದು ರಾಜ್ಯ ರಾಜಕಾರಣಿಗಳಿಗೆ ಪ್ರತಾಪ್ ಸಿಂಹ ಸಲಹೆ ನೀಡಿದ್ದಾರೆ.
ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಉಪವಾಸ ಕುರಿತು ಸಿದ್ದರಾಮಯ್ಯ ಹೇಳಿಕೆಗೆ ಪ್ರತಾಪ್ ಸಿಂಹ ಕಿಡಿ ಕಾರಿದ ಅವರು, ಆ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ.
ಸಿದ್ದರಾಮಯ್ಯಗೆ ಎಲ್ಲಾ ಗೊತ್ತಿದ್ದೂ ರಾಜಕೀಯಕ್ಕಾಗಿ ಮಾತನಾಡುತ್ತಾರೆ ಎಂದರು.