ವಿಜಯಸಾಕ್ಷಿ ಸುದ್ದಿ, ಕಲಬುರಗಿ
ಆ. 23 ರಿಂದ 9 ರಿಂದ 12ನೇ ತರಗತಿಯವರೆಗೆ ಶಾಲೆ ಆರಂಭಕ್ಕೆ ನಿರ್ಧರಿಸಲಾಗಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಒಂದು ವಾರ ನೋಡಿಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಗಡಿಭಾಗದ ಕೆಲ ತಾಲೂಕುಗಳನ್ನು ಹೊರತುಪಡಿಸಿ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಕಡಿಮೆಯಾಗಿದೆ. ಶಾಲೆ ಇಲ್ಲದಿರುವುದರಿಂದ ಅನೇಕ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ.
ಇನ್ನೂ ವಿಳಂಬ ಮಾಡಿದರೆ ಮಕ್ಕಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಮಾಣ ಬೀರಲಿದೆ. ಹೆಚ್ಚಿನ ಪಾಲಕರು ಶಾಲೆ ಪ್ರಾರಂಭದ ಪರವಾಗಿದ್ದಾರೆ. 9 ರಿಂದ 12ನೇ ತರಗತಿ ಫೀಡ್ ಬ್ಯಾಕ್ ನೋಡಿಕೊಂಡು 1 ರಿಂದ 8ನೇ ತರಗತಿವರೆಗಿನ ಶಾಲೆ ಪ್ರಾರಂಭದ ಬಗ್ಗೆ ತೀರ್ಮಾನ
ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸರ್ಕಾರ ಎಲ್ಲ ಮುನ್ನೆಚ್ಚರಿಕೆ ವಹಿಸಿಯೇ ಶಾಲೆ ಆರಂಭಿಸುತ್ತಿದೆ. ಹೀಗಾಗಿ ಪಾಲಕರು ಧೈರ್ಯದಿಂದ ಮಕ್ಕಳನ್ನು ಶಾಲೆಗೆ ಕಳುಹಿಸಬೇಕೆಂದು ಮನವಿ ಮಾಡಿದರು.
ಆಫ್ ಲೈನ್ ಜೊತೆಗೆ ಆನಲೈನ್ ತರಗತಿ ಕೂಡ ಇರಲಿದೆ ಎಂದ ಸಚಿವರು, ಶಿಕ್ಷಕರ ವರ್ಗಾವಣೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.