HomeKarnataka Newsಈ ಒಂದೇ ಜಿಲ್ಲೆಯಲ್ಲಿ ಎಷ್ಟು ಜನ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ ಗೊತ್ತಾ?

ಈ ಒಂದೇ ಜಿಲ್ಲೆಯಲ್ಲಿ ಎಷ್ಟು ಜನ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ ಗೊತ್ತಾ?

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ರಾಯಚೂರು

ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ಜೋರಾಗಿದೆ. ಮೂರನೇ ಅಲೆಯಲ್ಲಿ ಸೋಂಕು ಮಕ್ಕಳನ್ನು ಕಾಡುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಎರಡನೇ ಅಲೆಯಲ್ಲಿಯೇ ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ.
ಜಿಲ್ಲೆಯಲ್ಲಿ ಒಟ್ಟು 522 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ದೇವದುರ್ಗದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ 322 ಮಕ್ಕಳು ಸೇರಿದಂತೆ 522 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಸದ್ಯ ಈ ಮಕ್ಕಳನ್ನು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ 3ನೇ ಅಲೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ರಿಮ್ಸ್ ನಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲು ಈಗಾಗಲೇ 200 ಬೆಡ್ ಗಳ ವಾರ್ಡ್ ತೆರೆಯಲಾಗಿದೆ.
ಜಿಲ್ಲೆಯ ಘಟ್ಟರಾಗಡಹಳ್ಳಿಯಲ್ಲಿ ಒಂದೇ ದಿನ 12 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಮಕ್ಕಳನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಈ ಮಕ್ಕಳಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!