ವಿಜಯಸಾಕ್ಷಿ ಸುದ್ದಿ, ನವದೆಹಲಿ
Advertisement
ದೆಹಲಿಯಲ್ಲಿ ಕೊರೊನಾ ತಕ್ಕ ಮಟ್ಟಿಗೆ ಹತೋಟಿಗೆ ಬಂದರೂ ಕರ್ಫ್ಯೂ ವಿಸ್ತರಿಸಲಾಗಿದೆ. ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಅನಾವಶ್ಯಕ ಓಡಾಟವನ್ನು ಜೂ. 7ರ ಬೆಳಿಗ್ಗೆ 5ರ ವರೆಗೆ ನಿಷೇಧಿಸಲಾಗಿದೆ.
ಕೈಗಾರಿಕಾ ಪ್ರದೇಶಗಳ ಉತ್ಪಾದನಾ ಘಟಕಗಳಲ್ಲಿ ಹಾಗೂ ನಿರ್ಮಾಣ ಕಾರ್ಯಗಳಲ್ಲಿ ಕೆಲಸ ನಿರ್ವಹಿಸುವವರಿಗೆ ಕರ್ಫ್ಯೂ ಸಂದರ್ಭದಲ್ಲಿ ಅವಕಾಶ ನೀಡಲಾಗಿದೆ.
ಇನ್ನೊಂದೆಡೆ ಕೇರಳ ಸರರ್ಕಾರ ಕೂಡ ಜೂ. 9ರ ವರೆಗೆ ಲಾಕ್ ಡೌನ್ ವಿಸ್ತರಿಸಿದೆ. ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಉಳಿದ ಎಲ್ಲ ಸೇವೆಗಳು ಸ್ಥಗಿತಗೊಳಿಸಲಾಗಿದೆ.
ಈ ಕುರಿತು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ಕ್ಷೀಣಿಸುತ್ತಿದ್ದರೂ, ನಿರ್ಬಧಗಳನ್ನು ತೆಗೆದುಹಾಕುವ ಹಂತಕ್ಕೆ ರಾಜ್ಯ ಇನ್ನೂ ತಲುಪಿಲ್ಲ. ಮೇ. 31ರಿಂದ ಜೂ. 9ರ ವರೆಗೆ ಎಲ್ಲ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.