ವಿಜಯಸಾಕ್ಷಿ ಸುದ್ದಿ, ರೋಣ
ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ಗ್ರಾಪಂಗೆ ನುಗ್ಗಿದ ಜನರು ಪಿಠೋಪಕರಣ ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಈ ಘಟನೆ ರೋಣ ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ನಡೆದಿದೆ. ಮುದೇನಗುಡಿ ಗ್ರಾಮಸ್ಥರಿಂದ ಗ್ರಾಪಂಗೆ ಮುತ್ತಿಗೆ ಹಾಕಿ ಜನರು ದಾಂಧಲೆ ಮಾಡಿದ್ದಾರೆ.
ಗ್ರಾಪಂ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬದು ನಿರ್ಮಾಣ ಕಾರ್ಯದಲ್ಲಿ ಅವ್ಯವಹಾರ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ನೂರಾರು ಜನರು ಏಕಾಏಕಿ ಧಾವಿಸಿ ಗ್ರಾಪಂ ಕಚೇರಿ ಒಳಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಅಲ್ಲದೇ, ಗ್ರಾಪಂ ಸಿಬ್ಬಂದಿಗಳ ಮೇಲೆಯೂ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ತಾಲೂಕು ಪಂಚಾಯತಿ ಇಒ ಸಂತೋಷ ಪಾಟೀಲ್ ಅವರನ್ನು ಜನರು ತರಾಟೆಗೆ ತೆಗೆದುಕೊಂಡರು. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.