ಎಚ್ಚರ…! ಹಳ್ಳಿ ಹಳ್ಳಿಗೂ ಲಗ್ಗೆಯಿಡುತ್ತಿದೆ ಮಹಾಮಾರಿ ಕೊರೊನಾ!

0
Spread the love

ವಿಜಯಸಾಕ್ಷಿ ಸುದ್ದಿ, ದಾವಣಗೆರೆ

Advertisement

ಮಹಾಮಾರಿ ಜನರ ನಿರ್ಲಕ್ಷ್ಯದಿಂದಾಗಿ ಹಳ್ಳಿ – ಹಳ್ಳಿಗೂ ಎಂಟ್ರಿ ಕೊಡುತ್ತಿದೆ. ಸದ್ಯ ರಾಜ್ಯದ ಬಹುತೇಕ ಹಳ್ಳಿಗಳಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿ 29 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಅಲ್ಲದೇ, ಇದೇ ಗ್ರಾಮದ 1400 ಜನರ ವರದಿ ಇನ್ನೂ ಬಾಕಿ ಉಳಿದಿದೆ. ಹೀಗಾಗಿ ಜನರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಗ್ರಾಮದ 248 ಜನರನ್ನು ಪರೀಕ್ಷೆ ಮಾಡಲಾಗಿತ್ತು. ಆದರೆ, 29 ಜನರ ವರದಿ ಪಾಸಿಟಿವ್ ಬಂದಿದ್ದು, ಹಲವರ ವರದಿ ಬರುವುದು ಬಾಕಿ ಇದೆ. ಇದು ಆತಂಕಕ್ಕೆ ಕಾರಣವಾಗಿದೆ.

ರಾಮೇಶ್ವರ ಗ್ರಾಮದ ಜನರು ಶೀತ ಹಾಗೂ ಕೆಮ್ಮನಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿತ್ತು. ಊರಿನ ಅರ್ಧದಷ್ಟು ಜನ ಈ ರೀತಿ ಬಳಲುತ್ತಿದ್ದರು ಎಂದು ತಿಳಿದು ಬಂದಿತ್ತು. ಹೀಗಾಗಿ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಸದ್ಯ ಈ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಜನರ ಸಮಸ್ಯೆ ಆಲಿಸಿ ಎಲ್ಲರೂ ಪರೀಕ್ಷೆಗೆ ಒಳಪಡಬೇಕೆಂದು ಮನವಿ ಮಾಡಿದ್ದರು. ಹೀಗಾಗಿ ಗ್ರಾಮದ ಬಹುತೇಕರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಪಾಸಿಟಿವ್ ಬಂದಿರುವವರನ್ನು ಆಸ್ಪತ್ರೆಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ.

ಅಷ್ಟೇ ಅಲ್ಲದೇ, ಗ್ರಾಮದಲ್ಲಿಯೇ ಇನ್ನೂ ಎರಡು ದಿನಗಳ ಕಾಲ ಅಧಿಕಾರಿಗಳು ಉಳಿದು, ಪರೀಕ್ಷೆ ಮಾಡಬೇಕೆಂದು ರೇಣುಕಾಚಾರ್ಯ ತಿಳಿಸಿದ್ದಾರೆ. ಹೀಗಾಗಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಪರೀಕ್ಷೆ ಮಾಡುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here