ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಜನಪರ ಆಡಳಿತ ನೀಡುವೆ

0
Spread the love

  • ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನೂತನ ಸಿಎಂ ಹೇಳಿಕೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ನಾನು ಸಿಎಂ ಎನ್ನುವುದಕ್ಕಿಂತ, ಟೀಂ ವರ್ಕ ಮಾಡುತ್ತೇವೆ. ಎಲ್ಲರಂತೆ ನಾನು ಒಬ್ಬ ಎಂಬಂತೆ ಜನಪರ ಆಡಳಿತ ನೀಡುವುದೇ ನಮ್ಮ ಗುರಿ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,
ನಮ್ಮ ಮುಂದೆ ಆರ್ಥಿಕ, ಸಾಮಾಜಿಕ ಸವಾಲುಗಳಿವೆ. ಸಂಪುಟ ಸಹೋದ್ಯೋಗಿಗಳು, ಎಲ್ಲರ ನೆರವು ಪಡೆದು ಸವಾಲುಗಳನ್ನು ಎದುರಿಸುತ್ತೇವೆ ಎಂದವರು ಹೇಳಿದರು.

ಕಳೆದ ಒಂದೂವರೆ ವರ್ಷದಿಂದ ಕೊರೊನಾ ಸಂಕಷ್ಟವಿದೆ. ಕಳೆದ 2 ಬಾರಿಯಿಂದ ಪ್ರವಾಹದ ಸಂಕಷ್ಟವನ್ನು ರಾಜ್ಯದ ಜನ ಅನುಭವಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಜನರ ಸಂಕಷ್ಟಗಳಿಗೆ ನಮ್ಮ ಸರ್ಕಾರ ಸ್ಪಂದಿಸುತ್ತದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸುತ್ತದೆ. ಬಡವರು, ರೈತರ ಕಣ್ಣೀರು ಒರೆಸುವ ಕೆಲಸ ಮಾಡುತ್ತೇವೆ ಎಂದು ನೂತನ ಸಿಎಂ ಭರವಸೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here