ಏರ್ ಇಂಡಿಯಾ ಮೇಲೆ ದೊಡ್ಡ ಸೈಬರ್ ದಾಳಿ!

0
Spread the love

ವಿಜಯಸಾಕ್ಷಿ ಸುದ್ದಿ, ನವದೆಹಲಿ

Advertisement

ಏರ್ ಇಂಡಿಯಾ ಮೇಲೆ ದೊಡ್ಡ ಮಟ್ಟದ ಸೈಬರ್ ದಾಳಿ ನಡೆದಿದೆ. ಈ ಮೂಲಕ ಲಕ್ಷಾಂತರ ಪ್ರಯಾಣಿಕರ ವೈಯಕ್ತಿಕ ವಿವರಗಳು ಕಳ್ಳತನವಾಗಿವೆ.
ಫೆಬ್ರವರಿ ತಿಂಗಳಲ್ಲಿ ಡೇಟಾ ಪ್ರಾಸೆಸರ್ ಮೇಲೆ ದೊಡ್ಡ ಮಟ್ಟದ ಸೈಬರ್ ದಾಳಿ ನಡೆದಿದೆ. ಸುಮಾರು ಹತ್ತು ವರ್ಷಗಳ ಅವಧಿಯಲ್ಲಿನ ಡೇಟಾ ಕಳ್ಳತನ ಮಾಡಲಾಗಿದೆ. ಏರ್ ಇಂಡಿಯಾ ಗ್ರಾಹಕರ ಕ್ರೆಡಿಟ್ ಕಾರ್ಡ್, ಪಾಸ್‌ಪೋರ್ಟ್, ಫೋನ್ ನಂಬರ್ ಸೇರಿದಂತೆ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಿವೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ಈ ಸಂಗತಿ ವಿಶ್ವಾದ್ಯಂತ 4,500,000 ದತ್ತಾಂಶದ ಮೇಲೆ ಪರಿಣಾಮ ಬೀರಿದೆ. ಹೆಸರು, ಹುಟ್ಟಿದ ದಿನಾಂಕ, ಸಂಪರ್ಕ ಮಾಹಿತಿ, ಪಾಸ್‌ ಪೋರ್ಟ್, ಟಿಕೆಟ್, ಕ್ರೆಡಿಟ್ ಕಾರ್ಡ್, ಸ್ಟಾರ್ ಅಲಯನ್ಸ್‌ ಹಾಗೂ ಏರ್ ಇಂಡಿಯಾ ಪ್ರಯಾಣಿಕರ ಮಾಹಿತಿಗಳನ್ನು ಇದು ಒಳಗೊಂಡಿರುತ್ತದೆ. ಹೀಗಾಗಿ ಪ್ರಯಾಣಿಕರು ತಮ್ಮ ವೈಯಕ್ತಿಕ ಮಾಹಿತಿ ಸುರಕ್ಷತೆಗಾಗಿ ಸಾಧ್ಯವಾದಾಗಲೆಲ್ಲಾ ಪಾಸ್‌ವರ್ಡ್‌ ಬದಲಾಯಿಸುವಂತೆ ತಿಳಿಸುತ್ತಿರುತ್ತೇವೆ ಎಂದು ಸಂಸ್ಥೆ ಹೇಳಿದೆ.

ಕ್ರೆಡಿಟ್ ಕಾರ್ಡ್ ಹೊಂದಿರುವ ಸಿವಿವಿ/ಸಿವಿಸಿ ಡೇಟಾ ಸಂಗ್ರಹಿಸಲಾಗಿಲ್ಲ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ದಾಳಿಗೆ ಒಳಗಾದ ಪ್ರಯಾಣಿಕರಿಗೆ ಸಹಾಯ ಮಾಡಲು ಸಂಸ್ಥೆ ಕಾಲ್ ಸೆಂಟರ್ ಸ್ಥಾಪಿಸಿದೆ. ಈ ಕುರಿತು ತನಿಖೆಗೆ ಮುಂದಾಗಿದೆ.


Spread the love

LEAVE A REPLY

Please enter your comment!
Please enter your name here