ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ
ರವಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಹಾಗೂ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳ ತಂಡ ಶಿರಹಟ್ಟಿ ತಾಲೂಕಿನ ಕಡಕೋಳ ವ್ಯಾಪ್ತಿಯಲ್ಲಿ ಬರುವ ದೈವಿ ವನದಲ್ಲಿ ಟ್ರಕಿಂಗ್ ನಡೆಸಿದರು.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ನಿತ್ಯವೂ ಅನೇಕ ಕೆಲಸಗಳ ಮಧ್ಯೆ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಇವರಲ್ಲಿ ಮಾನಸಿಕ ಹಾಗೂ ದೈಹಿಕವಾಗಿ ಸ್ಥೈರ್ಯ ತುಂಬುವುದಕ್ಕೆ ಟ್ರಕಿಂಗ್ ಆಯೋಜಿಸಲಾಗಿತ್ತು ಎಂದರು.
ಕಪ್ಪತ್ತಗುಡ್ಡ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಲಿ
ಕಪ್ಪತ್ತಗುಡ್ಡ ಅಪಾರ ಸಸ್ಯಸಂಪತ್ತು, ಪ್ರಾಣಿ ಸಂಕುಲಗಳ ತಾಣವಾಗಿದ್ದು, ಜೊತೆಗೆ ದೇಶದಲ್ಲಿಯೇ ಕೆಲವೇ ಕೆಲವು ಸ್ಥಳಗಳಲ್ಲಿ ಇತ್ತೀಚೆಗೆ ಸ್ವಚ್ಛ ಗಾಳಿ ಇರುವ ಬಗ್ಗೆ ಅಧ್ಯಯನ ನಡೆಸಿದ್ದು ಅದರಲ್ಲಿ ಕಪ್ಪತ್ತಗುಡ್ಡ ಪ್ರದೇಶವೂ ಸಹ ಸೇರಿದ್ದು ಹೆಮ್ಮೆಯ ವಿಷಯವಾಗಿದೆ. ಆದ್ದರಿಂದ ಇಂತಹ ಹಲವು ವಿಶೇಷತೆಗಳನ್ನು ಒಳಗೊಂಡಂತಹ ಕಪ್ಪತ್ತಗುಡ್ಡ ಪ್ರದೇಶವನ್ನು ಸಂರಕ್ಷಿಸುವುದು ಸಾರ್ವಜನಿಕರು ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಬೇಕೆಂದು ಎಸ್ಪಿ ಯತಿಶ್ ಹೇಳಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.