ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
Advertisement
ಬಿಜೆಪಿಯು ಹಿರಿಯ ಮುಖಂಡ ಕಾಂತಿಲಾಲ್ ಬನ್ಸಾಲಿ ಅವರನ್ನು ಕರ್ನಾಟಕ ದ್ರಾಕ್ಷರಸ ಮಂಡಳಿಯ ಅಧ್ಯಕ್ಷರನ್ನಾಗಿ ಸರಕಾರ ನೇಮಿಸಿ ಆದೇಶ ಹೊರಡಿಸಿದೆ.
ತೋಟಗಾರಿಕೆ ಇಲಾಖೆಯ ಆಧೀನ ಕಾರ್ಯದರ್ಶಿ ಟಿ ವಿ ಸುನಂದಮ್ಮ ಈ ಕುರಿತು ನೇಮಕಾತಿ ಆದೇಶ ಹೊರಡಿಸಿದ್ದಾರೆ.
ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷರಾಗಿ ನೇಮಕವಾಗಿರುವ ಕಾಂತಿಲಾಲ್ ಬನ್ಸಾಲಿ ಅವರನ್ನು ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಅಭಿನಂದಿಸಿದ್ದು, ಗದಗ ಜಿಲ್ಲೆಯ ಮೊದಲ ಬಿಜೆಪಿ ಅಧ್ಯಕ್ಷರಾಗಿ ಪಕ್ಷವನ್ನು ತಳಹಂತದಲ್ಲಿ ಸಂಘಟಿಸಿದ್ದ ಕಾಂತಿಲಾಲ್ ಬನ್ಸಾಲಿ ಅವರನ್ನು ಸರಕಾರ ಗುರುತಿಸಿ ಅಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.