ವಿಜಯಸಾಕ್ಷಿ ಸುದ್ದಿ, ಅಣ್ಣಿಗೇರಿ
Advertisement
ಪಟ್ಟಣದ ಹೊರವಲಯದ ಗದಗ- ಹುಬ್ಬಳ್ಳಿ ರಸ್ತೆಯ ಕೊಂಡಿಕೊಪ್ಪ ಬ್ರಿಡ್ಜ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವಕನೊಬ್ಬ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ಜರುಗಿದೆ.

ಗದಗ ತಾಲೂಕಿನ ಹಾತಲಗೇರಿ ನಿವಾಸಿ ವಿಠ್ಠಲ ಹನಮಪ್ಪ ಹೂವಣ್ಣವರ (35) ಗದಗ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವಿಗೀಡಾಗಿದ್ದು, ಇನ್ನೊಂದು ಕಾರಿನಲ್ಲಿದ್ದ ಚಾಲಕ ಶ್ರೀನಿವಾಸ ವೆಂಕಟೇಶ ನಾಯ್ಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ವಿರುಪಾಕ್ಷಿ ಎಂಬಾತನಿಗೆ ಅಲ್ಪ ಪ್ರಮಾಣದಲ್ಲಿ ಗಾಯಗಳಾಗಿವೆ.

ಅತಿ ವೇಗವಾಗಿ ಗದಗ ಕಡೆ ಬರುತ್ತಿದ್ದ ಸ್ಕಾರ್ಪಿಯೋ ವಾಹನದ ಟಾಯರ್ ಸ್ಫೋಟಗೊಂಡಿದ್ದು, ಎದುರಿಗೆ ಬಂದ ಮತ್ತೊಂದು ಕಾರಿನ ಮೇಲೆ ಬಿದ್ದು, ಪಲ್ಟಿಯಾಗಿದೆ.
ಘಟನಾ ಸ್ಥಳಕ್ಕೆ ಅಣ್ಣಿಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
