ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ತಾಲೂಕಿನ ಕುಣಿಕೇರಿ ಗ್ರಾಮದ ಬಸ್ ನಿಲ್ದಾಣದ ಸಮೀಪ ಕಿರಾಣಿ ಅಂಗಡಿ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಅಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ವಶಕ್ಕೆ ಪಡೆದ ಆರೋಪಿಯನ್ನು ಕುಬೇರ ಬಂಡಿ ಎಂದು ಗುರುತಿಸಲಾಗಿದ್ದು, ಕುಣಿಕೇರಿ ಬಸ್ ನಿಲ್ದಾಣದ ಬಳಿ ಕಿರಾಣಿ ಅಂಗಡಿ ವ್ಯಾಪಾರ ಮಾಡುತ್ತಿದ್ದ ಎನ್ನಲಾಗಿದೆ. ಅಕ್ರಮವಾಗಿ ಮಾರಾಟಕ್ಕಿಟ್ಟಿದ್ದ ಸುಮಾರು 18 ಸಾವಿರ ರೂಪಾಯಿ ಮೌಲ್ಯದ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Advertisement
ಗುರುವಾರ ಸಂಜೆ ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಗೀತಾ ಬೆನಹಾಳ ಅವರ ದೂರಿನನ್ವಯ ಹಾಗೂ ಮಾರ್ಗದರ್ಶನದೊಂದಿಗೆ ಗ್ರಾಮೀಣ ಠಾಣೆಯ ಪಿಎಸ್ಐ ಫಕೀರಮ್ಮ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.