- ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ
ವಿಜಯಸಾಕ್ಷಿ ಸುದ್ದಿ, ಬೆಳಗಾವಿ
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಿಂದ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು, ನದಿತೀರದಲ್ಲಿ ನೀರಿನಲ್ಲಿ ಸಿಲುಕಿದ್ದ ಹಲವರನ್ನು ಎನ್‍ಡಿಆರ್‍ಎಫ್ ತಂಡ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.
ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಕಮತೆ ತೋಟದಲ್ಲಿ ಕೃಷ್ಣಾ ನದಿಯ ನೀರು ಆವರಿಸಿ ಮನೆಯೊಂದರ ಸುತ್ತುವರಿದ ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಎನ್‍ಡಿಆರ್‍ಎಫ್ ಸಿಬ್ಬಂದಿ ಹಾಗೂ ಅಂಕಲಿ ಪೊಲೀಸರು ಬೋಟ್ ಮೂಲಕ ತೆರಳಿ ಸಾಜನೆ ಕುಟುಂಬದ ನಾಲ್ವರನ್ನು ಯಡೂರ ಗ್ರಾಮಕ್ಕೆ ತಂದು ಸುರಕ್ಷಿತ ಸ್ಥಳಕ್ಕೆ ರವಾನಿಸಿದರು.
ಮುಳವಾಡದಲ್ಲಿ ಪ್ರವಾಹದಲ್ಲಿ ಸಿಲುಕಿದ್ದವರನ್ನು ರಕ್ಷಿಸಿ ಮುಳವಾಡದಿಂದ ಶಿರಗುಪ್ಪಿಗೆ ಸ್ಥಳಾಂತರಿಸಿದರು. ಮಾಂಗೂರ ಪಾಟಾದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಂತ್ರಸ್ತರನ್ನು ಯಮಗರ್ಣಿಗೆ ಸ್ಥಳಾಂತರಿಸಿದರು. ಹುಬ್ಬಳ್ಳಿಗೆ ಶಸ್ತ್ರ ಚಿಕಿತ್ಸೆಗೆ ಹೋಗಬೇಕಿದ್ದ ಓರ್ವ ರೋಗಿಯನ್ನು ಆಂಬುಲೆನ್ಸ್ ಮೂಲಕ ಹುಬ್ಬಳ್ಳಿಗೆ ಕಳಿಸಿಕೊಟ್ಟರು.