ವಿಜಯಸಾಕ್ಷಿ ಸುದ್ದಿ, ಕೋಲಾರ
Advertisement
ಕೇರಳದಿಂದ ಬಂದಿದ್ದ 28 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿನಿಯರನ್ನು ಕೊರೊನಾ ಕೇರ್ ಸೆಂಟರ್ ಗೆ ಶಿಫ್ಟ್ ಮಾಡಲಾಗಿದೆ.
ಕೋಲಾರ ಜಿಲ್ಲೆ ಕೆಜಿಎಫ್ ನ ಅಂಡರಸನ್ ಪೇಟೆ ಬಳಿ ಇರುವ ನೂರ್ ಅನೀಸ್ ನರ್ಸಿಂಗ್ ಕಾಲೇಜಿನಲ್ಲಿ ಸುಮಾರು 380ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಕಾಲೇಜು ಆರಂಭವಾದ ಕಾರಣ ಮೂರು ದಿನಗಳ ಹಿಂದೆ ಕೇರಳದಿಂದ ಬಂದಿದ್ದ 300 ವಿದ್ಯಾರ್ಥಿನಿಯರನ್ನು ಆರ್ ಟಿಪಿಎಸ್ ಟೆಸ್ಟ್ ಗೆ ಒಳಪಡಿಸಿದಾಗ 28 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಸದ್ಯ ನೂರ್ ಅನೀಸ್ ನರ್ಸಿಂಗ್ ಕಾಲೇಜು ಮತ್ತು ಹಾಸ್ಟೆಲ್ ಸೀಲ್ ಡೌನ್ ಮಾಡಲಾಗಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಸುನಿಲ್ ಮಾಹಿತಿ ನೀಡಿದ್ದಾರೆ.