ವಿಜಯಸಾಕ್ಷಿ ಸುದ್ದಿ, ಮೈಸೂರು
ನನ್ನ ಮಡದಿಗೂ ವೆಂಟಿಲೇಟರ್ ಕೊಡಿಸಲು ನನ್ನಿಂದ ಆಗುತ್ತಿಲ್ಲ ಎಂದು ಹೇಳುವ ಮೂಲಕ ಜಿಲ್ಲೆಯ ಡಿಎಚ್ ಒ ಅಮರನಾಥ್ ತಮ್ಮ ಅಸಹಾಯಕತೆ ಹೊರ ಹಾಕಿದ್ದಾರೆ.
ಹೀಗಂತ ಸಂಬಂಧಿಕರೊಂದಿಗೆ ಫೋನ್ ಸಂಭಾಷಣೆ ನಡೆಸಿರುವ ಅಮರನಾಥ್ ಅವರ ಆಡಿಯೋ ಸದ್ಯ ಸಖತ್ ವೈರಲ್ ಆಗಿದೆ. ವ್ಯಕ್ತಿಯೊಬ್ಬ ಅಮರನಾಥ್ ಅವರಿಗೆ ವೆಂಟಿಲೇಟರ್ ಕೊಡಿಸಿ ಎಂದು ಫೋನ್ ಮಾಡಿದ್ದರು. ಈ ಸಂದರ್ಭದಲ್ಲಿ ಅವರು ವಾರ್ ರೂಂ ಗೆ ಕರೆ ಮಾಡಿ ಅಲ್ಲಿ ಅರೆಂಜ್ ಮಾಡಿಕೊಡುತ್ತಾರೆ ಎಂದು ಹೇಳಿದ್ದಾರೆ.
ಆಗ ವ್ಯಕ್ತಿ, ಅವರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದಾರೆ. ಆಗ ಡಿಎಚ್ ಒ ಅವರು ಬೆಡ್ ಗೆ ಹಾಗೂ ನನಗೆ ಯಾವುದೇ ಸಂಬಂಧವಿಲ್ಲ. ನನಗೆ ಬೆಡ್ ಕೊಡಿಸಲು ಆಗಲ್ಲ. ನನಗೆ ನನ್ನ ಹೆಂಡತಿಗೂ ಬೆಡ್ ಕೊಡಿಸಲು ಯೋಗ್ಯತೆ ಇಲ್ಲ. ನನ್ನ ಕೈ ಸೋತು ಹೋಗಿದೆ ಎಂದು ಅಸಹಾಯಕತೆ ತೋರಿಸಿದ್ದಾರೆ.
ಆಗ ಕರೆ ಮಾಡಿದ್ದ ವ್ಯಕ್ತಿ, ಜವಾಬ್ದಾರಿ ಏಕೆ? ಕೆಲಸ ಬಿಟ್ಟು ಹೋಗಿ ಎಂದು ಹೇಳಿದ್ದಾರೆ. ಕೆಲಸದಿಂದ ಕಳುಹಿಸಿ ಬಿಟ್ಟು ಹೋಗಲು ಕೂಡ ಸಿದ್ಧನಿದ್ದೇನೆ ಎಂದಿರುವ ಡಿಎಚ್ ಒ ನನ್ನ ಮೇಲೆ ಯಾವುದೇ ಆಕ್ಷನ್ ತೆಗೆದುಕೊಳ್ಳಲಿ. ನಾನು ಮನೆಗೆ ಹೋಗಲು ರೆಡಿ ಇದ್ದೇನೆ. ನನ್ನ ಕೈಯಲ್ಲಿ ಬೆಡ್ ಕೊಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

