ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಕೊರೋನಾ ವಾರಿಯರ್ಸ್ ಎಂದು ಕರೆಯಲ್ಪಡುವ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಎರಡು ತಿಂಗಳ ಹಿಂದೆ 20 ದಿನಗಳ ಕಾಲ ನಡೆಸಿದ ಪ್ರತಿಭಟನೆಯಿಂದಾಗಿ ಎರಡು ಮೂರು ದಿನಗಳಲ್ಲಿ ವೇತನ ಹೆಚ್ಚಿಸುವುದಾಗಿ ಭರವಸೆ ನೀಡಿದ್ದ ಸರಕಾರ ಮಾತು ತಪ್ಪಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಶರಣು ಗಡ್ಡಿ ಆಕ್ರೋಶ ವ್ಯಕ್ತಪಡಿಸಿದರು.
ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 21ರಿಂದ ನಡೆಯುವ ಅಧಿವೇಶನದಲ್ಲಿ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಎಲ್ಲ ಆಶಾ ಕಾರ್ಯಕರ್ತೆಯರು ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ವೇಳೆ ಸಂಘಟನೆಯ ಕಾರ್ಯದರ್ಶಿ ಕೌಶಲ್ಯ ಹಿರೇಗೌಡರ್, ಶರಣು ಪಾಟೀಲ ಇತರರು ಇದ್ದರು.
Advertisement