- ಪೊಲೀಸರಿಗೆ ಶಹಬ್ಬಾಗಿರಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ
ವಿಜಯಸಾಕ್ಷಿ ಸುದ್ದಿ, ಮೈಸೂರು
ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 30 ಲಕ್ಷ ಪರಿಹಾರ ನೀಡಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ವೇಳೆಯಲ್ಲಿ ಇಲಾಖೆಯ ಪೊಲೀಸರು ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ 3 ರಿಂದ 4 ಸಾವಿರ ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಡೆತ್ ಅದವರ ಸಂಖ್ಯೆ ಕಡಿಮೆ ಇದೆ. ಎಂದು ತಿಳಿಸಿದರು.
ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆಗೆ ಲಂಚ ಪಡೆಯುವ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಂತಹ ಕೆಲಸಕ್ಕೆಲ್ಲ ಇದೀಗ ಕಡಿವಾಣ ಹಾಕಲಾಗುತ್ತಿದೆ. ಇದು ಹಳೆಯ ಪದ್ದತಿ, ಆದರೆ ಇದಕ್ಕೆ ನಮ್ಮ ಸರ್ಕಾರ ಕಡಿವಾಣ ಹಾಕಿದೆ ಎಂದು ಸಮರ್ಥಿಸಿಕೊಂಡರು. ಪೊಲೀಸ್ ಬೋರ್ಡ್ ಬಂದ ಬಳಿಕ ವರ್ಗಾವಣೆಯಲ್ಲಿ ವ್ಯವಹಾರಕ್ಕೆ ಕಡಿವಾಣ ಬೀಳಲಿದೆ ಎಂದು ಸಚಿವರು ಹೇಳಿದರು.
ಸಿಂಥೆಟಿಕ್ ಡ್ರಗ್ಸ್ ದಂಧೆಗೆ ಕಡಿವಾಣ
ಡ್ರಗ್ಸ್ ವಿದೇಶದಿಂದ ಡಾರ್ಕ್ ವೆಬ್ ನಲ್ಲಿ ಬರುತ್ತಿದೆ. ಬಹಳ ಸೆಕ್ಯೂರಿಟಿಯಲ್ಲಿ ಬರುತ್ತಿದೆ. ಇದನ್ನು ಕರ್ನಾಟಕ ಪೊಲೀಸರು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ್ದಾರೆ. ವರ್ಷದಷ್ಟು ಡ್ರಗ್ ಕೇವಲ ಒಂದೇ ವರ್ಷದಲ್ಲಿ ಸಂಗ್ರಹವಾಗಿದೆ. ಬಹಳಷ್ಟು ಸಾರಿ ಸಾಮಾನ್ಯ ಪೋಸ್ಟ್ ನಲ್ಲಿ ಡ್ರಗ್ಸ್ ಸರಬರಾಜಗುತ್ತದೆ. ಡ್ರಗ್ಸ್ ಕೇಸ್ ಸಂಬಂಧಿಸಿದಂತೆ ವಿದೇಶಿಗರ ಬಂಧನ ವಾಗಿದೆ. ಕಳೆದ ವರ್ಷದಲ್ಲಿ 15 ರಿಂದ 20 ಮಂದಿ ಬಂಧನವಾಗಿದೆ. ಈ ಪೈಕಿ ಆಫ್ರಿಕನ್ಸ್ ನವರೆ ಹೆಚ್ಚಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು.