ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯ ಜನರಿಗೆ ಮಂಗಳವಾರ ನೆಮ್ಮದಿ ತಂದಿದೆ. ಸತತ ನಾಲ್ಕನೇ ದಿನಗಳ ನಂತರ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ನೂರರ ಒಳಗೆ ಬಂದಿದೆ.
ಇವತ್ತಿನ ವರದಿಯಲ್ಲಿ ನರಗುಂದ ತಾಲೂಕು ಸೋಂಕು ಮುಕ್ತವಾಗಿದೆ.
ಕಳೆದ ಶುಕ್ರವಾರದಿಂದ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖದತ್ತ ಸಾಗಿದ್ದು, ಮಂಗಳವಾರ ಕೇವಲ 78 ಜನರಿಗೆ ಮಾತ್ರ ಸೋಂಕು ತಗುಲಿದ ಬಗ್ಗೆ ಜಿಲ್ಲಾಡಳಿತ ಹಾಗೂ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದರಿಂದಾಗಿ ಜಿಲ್ಲೆಯ ಜನ ನಿರಾಳರಾದಂತಾಗಿದೆ.
ಇಂದು 78 ಜನರಿಗೆ ಸೋಂಕು ತಗುಲಿದೆ. ಇಂದು ಜಿಲ್ಲಾಡಳಿತದ ಮಾಹಿತಿ ಪ್ರಕಾರ ಇಬ್ಬರು ಮೃತಪಟ್ಟಿದ್ದಾರೆ.
ಇಂದಿನ 78 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 25013 ಕ್ಕೆ ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -32, ಮುಂಡರಗಿ-13, ನರಗುಂದ-00, ರೋಣ-10, ಶಿರಹಟ್ಟಿ-21, ಹೊರಜಿಲ್ಲೆಯ-02 ಸೇರಿದಂತೆ 78 ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 277 ಕ್ಕೇರಿದೆ.
ಗದಗ ತಾಲೂಕಿನ ದುಂದೂರು ನಿವಾಸಿ 86 ವರ್ಷದ ವ್ಯಕ್ತಿ ಮೇ-31 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಜೂನ -06 ರಂದು ಮೃತಪಟ್ಟಿದ್ದಾರೆ.
ರೋಣ ತಾಲೂಕಿನ ಅಸೂಟಿ ಗ್ರಾಮದ ನಿವಾಸಿ 70 ವರ್ಷದ ವ್ಯಕ್ತಿ ಜೂನ್- 03 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಜೂನ್ 07 ರಂದೇ ಮೃತಪಟ್ಟಿದ್ದಾರೆ.
ಇವರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು 285 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 23391 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 1345 ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 120 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.