ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ನರಗುಂದ
ಇಲ್ಲಿನ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿರುವ ವಿ.ಜಿ. ಪವಾರ ಅವರು ಕೊರೊನಾ ನಿಯಂತ್ರಣಕ್ಕಾಗಿ ಶ್ರಮಿಸುತ್ತ, ಮಾದರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.
ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಮಕ್ಕಳಿಗೆ ಕೊರೊನಾ ನಿಯಂತ್ರಣ ಕುರಿತು ಮಾಹಿತಿ ನೀಡುವ ಜತೆಗೆ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡುತ್ತಿದ್ದಾರೆ.
ಮಕ್ಕಳಿಗೆ ಸರಿಯಾಗಿ ಮಾಸ್ಕ್ ಧರಿಸುವ ಕುರಿತು ಪ್ರಾತ್ಯಕ್ಷಿಕೆ ನೀಡುತ್ತಿದ್ದಾರೆ. ಇಷ್ಟಾಗಿಯೂ ಮಾಸ್ಕ್ ಧರಿಸದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ದಂಡ ವಿಧಿಸುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆಯುತ್ತಿದ್ದಾರೆ.
Advertisement