HomeCrime Newsಕೊರೊನಾ; ನೆಗೆಟಿವ್ ವರದಿ ಬಂದ್ರೂ ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಕೊರೊನಾ; ನೆಗೆಟಿವ್ ವರದಿ ಬಂದ್ರೂ ಆತ್ಮಹತ್ಯೆಗೆ ಶರಣಾದ ಶಿಕ್ಷಕ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ ಗದಗ

ಕುಟುಂಬಸ್ಥರಿಗೆಲ್ಲ ಕೊರೊನಾ ಬರುತ್ತದೆ ಎಂಬ ಕಾರಣಕ್ಕೆ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಈ ಘಟನೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ‌ ಮಹಾಂತೇಶ್ ಪ್ರಭುದೇವ ಕುದರಿ(37) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಶಿಕ್ಷಕ ಗದಗ ತಾಲೂಕಿನ ಕುರ್ತಕೋಟಿ ಸರ್ಕಾರಿ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ‌ ಸಲ್ಲಿಸುತ್ತಿದ್ದರು.

ಶಿಕ್ಷಕ ಮಹಾಂತೇಶ್ ಅವರಿಗೆ ಕಳೆದ ಒಂದು ವಾರದ ಹಿಂದೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಅಲ್ಲದೇ, ಅವರು ಸೋಂಕಿನಿಂದ ಗುಣಮುಖರಾಗಿದ್ದರು ಕೂಡ. ಅವರ ವರದಿ ನೆಗೆಟಿವ್ ಕೂಡ ಬಂದಿತ್ತು. ಆದರೆ, ಶಿಕ್ಷಕರು ಮಾತ್ರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದರು. ಕೊರೊನಾ ಪಾಸಿಟಿವ್ ಆಗಿದ್ದರಿಂದಾಗಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ನರೇಗಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ದೂರು ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಖಾಸಗಿ ‌ಆಸ್ಪತ್ರೆಯಲ್ಲಿ ಮಹಾಂತೇಶ್ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ನೆಗೆಟಿವ್ ಬಂದಿದ್ದರಿಂದಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು ಎಂದು ನರೇಗಲ್ ಪಿಎಸ್ ಐ ರಾಘವೇಂದ್ರ ಮಾಹಿತಿ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!