ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯಲ್ಲಿ ಇಂದು 21 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಕಳೆದ ಮಂಗಳವಾರವೂ 21 ಜನರಲ್ಲಿ ಸೋಂಕು ಪತ್ತೆಯಾಗಿತ್ತು.
ಇಂದು 21 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25649 ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -03, ಮುಂಡರಗಿ-03, ನರಗುಂದ-04, ರೋಣ-03, ಶಿರಹಟ್ಟಿ-08, ಹೊರಜಿಲ್ಲೆಯ-00 ಸೇರಿದಂತೆ 21 ಪ್ರಕರಣಗಳು ದೃಢಪಟ್ಟಿವೆ.
ಇಂದು ಕೋವಿಡ್ ನಿಂದ ಯಾವುದೇ ಸಾವು ಸಂಭವಿಸಿಲ್ಲ. ಇದುವರೆಗೂ ಜಿಲ್ಲೆಯಲ್ಲಿ ಕೋವಿಡ್ ನಿಂದಾಗಿ 294 ಜನರು ಮೃತಪಟ್ಟಿದ್ದಾರೆ.
ಇಂದು 53 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 25082 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 273 ಜನ ಸೋಂಕಿತರು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 70 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.