ವಿಜಯಸಾಕ್ಷಿ ಸುದ್ದಿ, ನವದೆಹಲಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಹಿಂದೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿದ್ದರಿಂದ ಪ್ರತಿ ದಿನ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಸದ್ಯ ಕೊರೊನಾ ಲಸಿಕೆಗೂ ಜಿಎಸ್ಟಿದ ವಿಧಿಸುತ್ತಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, ಮಹಾಮಾರಿಯಿಂದಾಗಿ ಜನರು ಸಾಕಷ್ಟು ಸಂಕಟ ಅನುಭವಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಜನರ ಸಹಾಯಕ್ಕೆ ಮುಂದೆ ಬರಬೇಕಾಗಿರುವ ಪ್ರಧಾನಿ ಮೋದಿ, ತೆರಿಗೆ ವಸೂಲಿ ಮಾಡಿ ಜನರನ್ನು ಮತ್ತಷ್ಟು ಕಷ್ಟಕ್ಕೆ ದೂಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೊನಾ ಲಸಿಕೆಯ ಮೇಲೆ ಶೇ. 5ರಷ್ಟು ತೆರಿಗೆ ವಿಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಈಗಾಗಲೇ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ಪ್ರಶ್ನಿಸಿವೆ. ಇದೀಗ ರಾಹುಲ್ ಗಾಂಧಿ ಸಹ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೊನಾ ವ್ಯಾಕ್ಸಿನ್ ಮೇಲೆ ಶೇ.5 ರಷ್ಟು ಜಿಎಸ್ಟಿದ ವಿಧಿಸಿದ್ದಕ್ಕೆ ರಾಜ್ಯ ಸರ್ಕಾರಗಳು ಪ್ರತಿ ಡೋಸ್ ಗೆ ರೂ. 20ರಷ್ಟು ತೆರಿಗೆಯನ್ನು ರಾಜ್ಯ ಸರ್ಕಾರಗಳು ಕೇಂದ್ರಕ್ಕೆ ಭರಿಸಬೇಕಾಗಿದೆ. ದೇಶದಲ್ಲಿಯೇ ತಯಾರಾದ ಕೊರೊನಾ ಲಸಿಕೆಗೆ ಜಿಎಸ್ಟಿನ ವಿಧಿಸುತ್ತಿರುವುದಕ್ಕೆ ರಾಜಸ್ಥಾನ, ಛತ್ತಿಸ್ಗದಡ ಸೇರಿದಂತೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ಒಡಿಶಾ ಸಿಎಂ ನವೀನ್ ಪಟ್ನಾಯಕ್ ಸಹ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ವ್ಯಾಕ್ಸಿನ್ ಮೇಲಿನ ಜಿಎಸ್ಟಿಸ ತೆರವುಗೊಳಿಸುವಂತೆ ಮನವಿ ಮಾಡಿದ್ದಾರೆ.