ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿ

0
Spread the love

ವಿಜಯಸಾಕ್ಷಿ ಸುದ್ದಿ, ಭೋಪಾಲ್

Advertisement

ಕೊರೊನಾ ಮಹಾಮಾರಿಯಿಂದ ಈಗಾಗಲೇ ಇಡೀ ದೇಶವೇ ಕಂಗಾಲಾಗಿದೆ. ಆದರೆ, ಹಲವು ಪಾಪಿಗಳು ಇಂತಹ ಸನ್ನಿವೇಶವನ್ನೇ ಉಪಯೋಗಿಸಿಕೊಂಡು ಅವಾಂತರಗಳನ್ನು ಸೃಷ್ಟಿಸುತ್ತಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ 43 ವರ್ಷದ ಮಹಿಳೆಯೊಬ್ಬರು ಏ. 6ರಂದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ನರ್ಸ್ ಒಬ್ಬ, ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಅತ್ಯಾಚಾರ ಎಸಗಿದ ವ್ಯಕ್ತಿಯ ಮೇಲೆ ಮಹಿಳೆ ದೂರು ದಾಖಲಿಸಿದ್ದರು. ವೈದ್ಯರಿಗೆ ಈ ಕುರಿತು ಹೇಳಿಕೆ ನೀಡಿವಾಗ ಆರೋಪಿಯನ್ನು ಕೂಡ ಅವರು ಗುರುತಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಅತ್ಯಾಚಾರ ನಡೆದ ಕೆಲವೇ ಗಂಟೆಗಳಲ್ಲಿ ಮಹಿಳೆಯ ಆರೋಗ್ಯ ಸ್ಥಿತಿ ಹದಗೆಡಲು ಆರಂಭಿಸಿದೆ. ಗಂಭೀರತೆಯನ್ನು ಅರಿತು ಕೂಡಲೇ ಆಕೆಯನ್ನು ವೆಂಟಿಲೇಟರ್ ಗೆ ಸ್ಥಳಾಂತರ ಮಾಡಲಾಯಿತು. ಆದರೆ ಅದೇ ದಿನ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತೋಷ್(40) ಎಂದು ಗುರುತಿಸಲಾಗಿದೆ. ಸದ್ಯ ಬಂಧಿತ ಆರೋಪಿಯನ್ನು ಭೋಪಾಲ್ ನ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ.


Spread the love

LEAVE A REPLY

Please enter your comment!
Please enter your name here