ವಿಜಯಸಾಕ್ಷಿ ಸುದ್ದಿ, ಗದಗ
ಮೇ 10 ಸೋಮವಾರ ಸೋಂಕಿನ ಸ್ಫೋಟ ಮುಂದುವರೆದಿದೆ. ಆದರೆ ಕಳೆದ ಎರಡು ದಿನಗಳ ಕಾಲ ಬಂದಿದ್ದ ಸೋಂಕಿತರ ಸಂಖ್ಯೆ ಮೀರಿದೆ. ಮತ್ತೆ ಇಬ್ಬರು ಕೋವಿಡ್ ನಿಂದ ಮೃತಪಟ್ಟಿದ್ದಾರೆ.
ಇಂದಿನ 383 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 15127 ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -142, ಮುಂಡರಗಿ-58, ನರಗುಂದ-24, ರೋಣ-111, ಶಿರಹಟ್ಟಿ-32 ಹೊರಜಿಲ್ಲೆಯ-16 ಸೇರಿದಂತೆ 383 ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲಾಡಳಿತ ಹಾಗೂ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದ ಮಾಹಿತಿ ಅಂತೆ ಇಬ್ಬರು ಮೃತಪಟ್ಟಿದ್ದಾರೆ.
ಗದಗ ಶಹರದ ನಿವಾಸಿ 61 ವರ್ಷ ವಯಸ್ಸಿನ ವ್ಯಕ್ತಿ ಮೇ 8 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಇವರಿಗೆ ಮೇ 4 ರಂದೇ ಕೋವಿಡ್ ದೃಢಪಟ್ಟಿತ್ತು. ಶ್ವಾಸಕೋಶ ಹಾಗೂ ನ್ಯುಮೋನಿಯಾದಿಂದಾಗಿ ಮೇ 08 ರಂದು ಮೃತಪಟ್ಟಿದ್ದಾರೆ.
ಇನ್ನೊಬ್ಬ ಬೆಟಗೇರಿಯ ನಿವಾಸಿ 60 ವರ್ಷದ ವ್ಯಕ್ತಿ ಮೇ 04 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಇವರಿಗೆ ಕೋವಿಡ್ ದೃಢಪಟ್ಟಿತ್ತು. ಶ್ವಾಸಕೋಶ ಹಾಗೂ ನ್ಯುಮೋನಿಯಾದಿಂದಾಗಿ ಮೇ 08 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹೇಳಿದ್ದಾರೆ.
ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದರಿಂದಾಗಿ ಇದುವರೆಗೂ ಜಿಲ್ಲೆಯಲ್ಲಿ
160 ಜನರು ಸೋಂಕಿಗೆ ಬಲಿಯಾದಂತಾಗಿದೆ.
ಇಂದು 225 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 13417 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 1550 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 198 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.