ವಿಜಯಸಾಕ್ಷಿ ಸುದ್ದಿ, ಮುಂಬಯಿ
ಪ್ರಸಕ್ತ ಸಾಲಿನ ಐಪಿಎಲ್ ಪಂದ್ಯಾವಳಿಯನ್ನು ಕೊರೊನಾ ಹಾವಳಿಯ ಹಿನ್ನೆಲೆಯಲ್ಲಿ ಸದ್ಯ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹಾವಳಿ ವಿಪರೀತ ಹೆಚ್ಚಾಗುತ್ತಿದೆ. ಅಲ್ಲದೇ, ದಿನದಿಂದ ದಿನಕ್ಕೆ ಆಟಗಾರರಲ್ಲಿಯೂ ಸೋಂಕು ಕಾಣಿಸಿಕೊಳ್ಳುತ್ತಿದೆ. ವಿವಿಧ ತಂಡಗಳ ಆಟಗಾರರು ಸೇರಿದಂತೆ 7 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ನಿನ್ನೆ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಬೆಂಗಳೂರು ತಂಡದ ಪಂದ್ಯವನ್ನು ಕೂಡ ಕೊರೊನಾ ಆಹುತಿ ಮಾಡಿಕೊಂಡಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರು ತಂಡದ ನಡುವೆ ನಡೆಯಬೇಕಿದ್ದ ಪಂದ್ಯವನ್ನು ರದ್ದುಗೊಳಿಸಲಾಗಿತ್ತು.
ಇಂದು ಹೈದ್ರಾಬಾದ್ ತಂಡ ಹಾಗೂ ಮುಂಬಯಿ ತಂಡದ ನಡುವೆ ಪಂದ್ಯಗಳು ನಡೆಯಬೇಕಿತ್ತು. ಆದರೆ, ಬಿಸಿಸಿಐ ಪಂದ್ಯವನ್ನು ತಾತ್ಕಾಲಿಕವಾಗಿ ಮುಂದೂಡಲು ನಿರ್ಧರಿಸಿದೆ.