ವಿಜಯಸಾಕ್ಷಿ ಸುದ್ದಿ, ಗದಗ
ಏಪ್ರಿಲ್ 28 ಬುಧವಾರ ಜಿಲ್ಲೆಯಲ್ಲಿ ಮತ್ತೊಮ್ಮೆ ಕೊರೋನಾ ಸೋಂಕು ಸ್ಫೋಟಗೊಂಡಿದೆ. 129 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಎರಡನೇ ಅಲೆ ಸತತ ಎರಡನೇ ದಿನವೂ ಶತಕ ದಾಟಿದೆ.
ಇಂದಿನ 129 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12448 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -77 , ಮುಂಡರಗಿ-02, ನರಗುಂದ-04, ರೋಣ-24, ಶಿರಹಟ್ಟಿ-15, ಹೊರಜಿಲ್ಲೆಯ-07 ಸೇರಿದಂತೆ 129 ಪ್ರಕರಣಗಳು ದೃಢಪಟ್ಟಿವೆ.
ಇದುವರೆಗೂ ಜಿಲ್ಲೆಯಲ್ಲಿ
141 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ಇಂದು 72 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 11657 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇಂದು ಜಿಲ್ಲೆಯಲ್ಲಿ 650 ಪ್ರಕರಣಗಳು ಸಕ್ರಿಯವಾಗಿದ್ದು, ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 196 ಜನರ ವರದಿ ಬರಲು ಬಾಕಿ ಇದೆ.
ಪರೀಕ್ಷೆಗಾಗಿ ಸಂಗ್ರಹಿಸಿದ 338811ಮಾದರಿಗಳಲ್ಲಿ 326167 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.