ಕೊರೋನಾ; ಸೋಮವಾರ 191 ಜನರಿಗೆ ಸೋಂಕು, ಒಬ್ಬರ ಸಾವು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಮೇ 03 ಸೋಮವಾರ ಜಿಲ್ಲೆಯಲ್ಲಿ ಕೊರೋನಾ ಸೋಂಕು ತನ್ನ ‌ಅಟ್ಟಹಾಸ ಮೆರೆದಿದೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಸಾವಿಗಿಡಾಗಿದ್ದು, ದೃಢಪಟ್ಟಿದೆ.

ಮೃತಪಟ್ಟವರು ಬಳ್ಳಾರಿ ಜಿಲ್ಲೆಯ ಹಂಪಸಾಗರದ 51 ವರ್ಷದ ಪುರುಷ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ನ್ಯುಮೋನಿಯಾ ಹಾಗೂ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಏಪ್ರಿಲ್ 30 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.

ಗದಗ ಜಿಲ್ಲೆಯಲ್ಲಿ ಸೋಂಕು ದಿನದಿನಕ್ಕೆ ಹೆಚ್ಚಾಗುತ್ತಿದ್ದು, ಅದರಲ್ಲೂ ಗದಗ‌ ನಗರ ಹಾಗೂ ತಾಲೂಕಿನಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬರುತ್ತಿದ್ದಾರೆ. ಎರಡನೇ ಅಲೆ ಸದ್ದಿಲ್ಲದೇ ಪ್ರಸರಿಸುತ್ತಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.

ಇಂದಿನ 191 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13216 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -145 , ಮುಂಡರಗಿ-12, ನರಗುಂದ-10, ರೋಣ-09, ಶಿರಹಟ್ಟಿ-07 ಹೊರಜಿಲ್ಲೆಯ-08 ಸೇರಿದಂತೆ 191 ಪ್ರಕರಣಗಳು ದೃಢಪಟ್ಟಿವೆ.

ಇಂದಿನ ಸಾವಿನ ಒಂದು ಪ್ರಕರಣದಿಂದಾಗಿ ಇದುವರೆಗೂ ಜಿಲ್ಲೆಯಲ್ಲಿ
142 ಜನರು ಸೋಂಕಿಗೆ ಬಲಿಯಾದಂತಾಗಿದೆ.

ಇಂದು 145 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 12238 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 836 ಪ್ರಕರಣಗಳು ಸಕ್ರಿಯವಾಗಿದ್ದು, 540 ಜನರು ಮನೆಯಲ್ಲಿ, 296 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 187 ಜನರ ವರದಿ ಬರಲು ಬಾಕಿ ಇದೆ.

ಪರೀಕ್ಷೆಗಾಗಿ ಸಂಗ್ರಹಿಸಿದ 347478 ಮಾದರಿಗಳಲ್ಲಿ 334076 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here