ವಿಜಯಸಾಕ್ಷಿ ಸುದ್ದಿ, ಗದಗ
Advertisement
ಏಪ್ರಿಲ್ 26 ಸೋಮವಾರ ಜಿಲ್ಲೆಯಲ್ಲಿ ಸೋಂಕು ಸ್ಫೋಟಗೊಂಡಿದೆ. 97 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಎರಡನೇ ಅಲೆ ಇದೇ ಮೊದಲ ಬಾರಿಗೆ ಶತಕದ ಅಂಚಿಗೆ ಬಂತು ನಿಂತಿದೆ.
ಇಂದಿನ 97 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12200 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -69 , ಮುಂಡರಗಿ-04, ನರಗುಂದ-03, ರೋಣ-12, ಶಿರಹಟ್ಟಿ-08, ಹೊರಜಿಲ್ಲೆಯ-01 ಸೇರಿದಂತೆ 97 ಪ್ರಕರಣಗಳು ದೃಢಪಟ್ಟಿವೆ.
ಇದುವರೆಗೂ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ 334499 ಮಾದರಿಗಳಲ್ಲಿ 322064 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

