ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ
Advertisement
ಶೀಘ್ರವೇ ಬಿಜೆಪಿ ಸೇರುವುದಾಗಿ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮಾಜಿ ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ.
ಬಿಜೆಪಿ ಬರುವಂತೆ ಬಿಎಸ್ ವೈ ಆಹ್ವಾನಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಮಾತುಕತೆ ನಡೆಸುವಂತೆ ತಿಳಿಸಿದ್ದಾರೆ ಎಂದು ಹೇಳಿದರು.
ಯಾವುದೇ ಷರತ್ತುಗಳಿಲ್ಲದೆ ಪಕ್ಷ ಸೇರಲು ತೀರ್ಮಾನಿಸಿದ್ದೇನೆ. ಶೀಘ್ರದಲ್ಲೇ ಬಿಜೆಪಿ ಸೇರುವ ದಿನಾಂಕ ನಿಗದಿಯಾಗಲಿದೆ ಎಂದು ಎನ್. ಮಹೇಶ್ ತಿಳಿಸಿದರು.