ವಿಜಯಸಾಕ್ಷಿ ಸುದ್ದಿ, ಬೀದರ್
ಖೋಟಾ ನೋಟು ತಯಾರಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಬೀದರ್ ನಗರದ ಗಾಂಧಿಗಂಜ್ ಪೊಲೀಸರು ಐವರನ್ನು ಬಂಧಿಸಿ, ಸುಮಾರು 37 ಸಾವಿರ ಮೌಲ್ಯದ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಅಶೋಕ್, ಸೈಯದ್ ಇಬ್ರಾಹಿಂ, ಉಮಾಕಾಂತ, ಜಾವೀದ್, ಬಂಧಿತರು.
ಬಂಧಿತ ಆರೋಪಿಗಳಿಂದ 5 ನೂರು ಮುಖ ಬೆಲೆಯ 274 ಖೋಟಾ ನೋಟು, ಪ್ರಿಂಟ್ ಮಾಡಲು ಬಳಸಿದ್ದ ಲ್ಯಾಪ್ ಟಾಪ್, ಪ್ರಿಂಟರ್ ಹಾಗೂ ಇತರೆ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಳೆದೊಂದು ವರ್ಷದಿಂದ 20 ಲಕ್ಷಕ್ಕೂ ಹೆಚ್ಚು ನಕಲಿ ನೋಟು ಮುದ್ರಣ ಹಾಗೂ ಚಲಾವಣೆ ಮಾಡಿದ್ದಾರೆಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ವ್ಯವಹಾರದ ವೇಳೆ 500 ರೂಪಾಯಿ ನೋಟು
ತೆಗೆದುಕೊಳ್ಳುವಾಗ ನೋಟು ಪರೀಕ್ಷಿಸಿ ಪಡೆಯಬೇಕೆಂದು ಎಸ್ಪಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.