ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜೈ ಹನುಮಾನ್ ಯುವಕ ಸಂಘ, ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಮಿತಿ ಹಾಗೂ ವಿವೇಕಾನಂದ ನಗರದ ಕಾಶಿ ವಿಶ್ವನಾಥ ದೇವಸ್ಥಾನದ ಸಹಯೋಗದಲ್ಲಿ 27ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಆಗಸ್ಟ್ 31ರ ಬೆಳಿಗ್ಗೆ 10.30 ಗಂಟೆಗೆ ಮಹಿಳೆಯರಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿವೆ.
Advertisement
ಸೆ. 1ರಂದು ಸಂಜೆ 5 ಗಂಟೆಗೆ ಕಾರ್ತಿಕೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ ನಡೆಯಲಿದೆ. ಸೆ. 2ರಂದು ಬೆಳಿಗ್ಗೆ 8 ಗಂಟೆಗೆ ಸತ್ಯನಾರಾಯಣ ಪೂಜೆ, ಡಾ.ಪಂ. ಪುಟ್ಟರಾಜ ಗವಾಯಿಗಳವರ ಪುಣ್ಯ ಸ್ಮರಣೋತ್ಸವ ಹಾಗೂ ಮಧ್ಯಾಹ್ನ 12.30ಕ್ಕೆ ಪ್ರಸಾದ ಸೇವೆ ನಡೆಯಲಿದೆ.
ಸೆ. 3ರಂದು ಸಂಜೆ 5 ಗಂಟೆಗೆ ಸನ್ಮಾನ, ಬಹುಮಾನ ವಿತರಣೆ ಕಾರ್ಯಕ್ರಮ ಜರುಗಲಿದೆ. ಸೆ. 4ರ ಸಂಜೆ 4 ಗಂಟೆಗೆ ಗಣೇಶನ ಮಹಾಪೂಜೆಯೊಂದಿಗೆ ಗಣೇಶನ ಮೂರ್ತಿಯನ್ನು ಭವ್ಯ ಮೆರವಣಿಯೊಂದಿಗೆ ವಿಸರ್ಜನೆ ಮಾಡಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.