ವಿಜಯಸಾಕ್ಷಿ ಸುದ್ದಿ, ಗದಗ:
Advertisement
ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯನ್ನಾಗಿ ಹೊನ್ನಾಂಬ ಅವರನ್ನು ಸರಕಾರ ಸೋಮವಾರ ನಿಯೋಜಿಸಿದೆ.
ಇಲ್ಲಿನ ಜಿಲ್ಲಾಧಿಕಾರಿಯಾಗಿದ್ದ ಎಂ.ಸುಂದರೇಶ ಬಾಬು ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಕಾರ್ಪೊರೇಷನ್‌ಗೆ ವರ್ಗಾವಣೆ ಮಾಡಲಾಗಿದ್ದು ವ್ಯವಸ್ಥಾಪಕ ನಿರ್ದೇಶಕ ಹುದ್ದೆ ನೀಡಲಾಗಿದೆ.
ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಯಾಗಿದ್ದ ಹೊನ್ನಾಂಬ ಅವರನ್ನು ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸರಕಾರ ವರ್ಗಾವಣೆ ಮಾಡಿದೆ.