ವಿಜಯಸಾಕ್ಷಿ ಸುದ್ದಿ, ಗದಗ
ಮೇ 07 ಶುಕ್ರವಾರ ಗದಗ ಜಿಲ್ಲೆಯಲ್ಲಿ ಸೋಂಕು ಸ್ಫೋಟವಾಗಿದೆ. ಕಳೆದ ಮೂರು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದ ಸೋಂಕು, ಶುಕ್ರವಾರ ದ್ವಿಶತಕ ದಾಟಿದೆ. 248 ಜನರಿಗೆ ಸೋಂಕು ತಗುಲಿದ್ದು, ಕೋವಿಡ್ ನಿಂದ ಮತ್ತೆ ಮೂವರು ಜನರು ಮೃತಪಟ್ಟಿದ್ದಾರೆ.
ಇಂದಿನ 248 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14035 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -151, ಮುಂಡರಗಿ-19, ನರಗುಂದ-08, ರೋಣ-40, ಶಿರಹಟ್ಟಿ-17, ಹೊರಜಿಲ್ಲೆಯ-13 ಸೇರಿದಂತೆ 248 ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲಾಡಳಿತ ಹಾಗೂ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದ ಮಾಹಿತಿಯಿಂದಾಗಿ ಮೂವರು ಮೃತಪಟ್ಟಿದ್ದಾರೆ. ಗದಗ ನಗರದ 50 ವರ್ಷದ ಮಹಿಳೆ ಮೇ 01 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದು, ಇನ್ನೊಬ್ಬರು ಮಹಾವೀರ ಕಾಲೋನಿಯ 69 ವರ್ಷದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಮೇ 06 ರಂದು ಮೃತಪಟ್ಟಿದ್ದಾರೆ. ಗದಗನ ಕಳಸಾಪೂರ ರಸ್ತೆಯ ಕೆ ಎಸ್ ಆರ್ಟಿಸಿ ಕಾಲೋನಿಯ 62 ವರ್ಷದ ವ್ಯಕ್ತಿ, ಮೇ 6 ರಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇದರಿಂದಾಗಿ ಇದುವರೆಗೂ ಜಿಲ್ಲೆಯಲ್ಲಿ
153 ಜನರು ಸೋಂಕಿಗೆ ಬಲಿಯಾದಂತಾಗಿದೆ.
ಇಂದು 158 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 12809 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 1074 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 211 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.