HomeGadag Newsಗದಗ ಜಿಲ್ಲೆಯಲ್ಲಿ ಮುಂದುವರೆದ ಕೊರೊನಾ ಆರ್ಭಟ; 368 ಜನರಿಗೆ ಸೋಂಕು, ಮೂವರ ಸಾವು

ಗದಗ ಜಿಲ್ಲೆಯಲ್ಲಿ ಮುಂದುವರೆದ ಕೊರೊನಾ ಆರ್ಭಟ; 368 ಜನರಿಗೆ ಸೋಂಕು, ಮೂವರ ಸಾವು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ

ಮೇ 09 ಭಾನುವಾರವೂ ಸೋಂಕಿನ ಸ್ಫೋಟ ಮುಂದುವರೆದಿದೆ. ಭಾನುವಾರ 368 ಜನರಿಗೆ ಸೋಂಕು ಪತ್ತೆಯಾಗಿದ್ದು, ಮತ್ತೆ ಮೂರು ಜನ ಕೋವಿಡ್ ನಿಂದ ಮೃತಪಟ್ಟಿದ್ದಾರೆ.

ಇಂದಿನ 368 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 14744 ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -178, ಮುಂಡರಗಿ-30, ನರಗುಂದ-37, ರೋಣ-35, ಶಿರಹಟ್ಟಿ-78 ಹೊರಜಿಲ್ಲೆಯ-10 ಸೇರಿದಂತೆ 368 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹಾಗೂ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದ ಮಾಹಿತಿಯಿಂದಾಗಿ ಮೂರು ಜನ ಮೃತಪಟ್ಟಿದ್ದಾರೆ.

ಗದಗ ಶಹರದ ನಿವಾಸಿ 46 ವರ್ಷದ ಮಹಿಳೆ ಮೇ 02 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಇವರಿಗೆ ಕೋವಿಡ್ ದೃಢಪಟ್ಟಿತ್ತು, ಹೃದಯಾಘಾತದಿಂದ ಮೇ 07 ರಂದು ಮೃತಪಟ್ಟಿರುತ್ತಾರೆ.

ಗದಗನ 52 ವರ್ಷದ ಮಹಿಳೆ ಮೇ 01 ರಂದು ಜಿಮ್ಸ್ ಗೆ ದಾಖಲಾಗಿದ್ದು, ಕೋವಿಡ್ ದೃಢಪಟ್ಟಿತ್ತು, ಮಧುಮೇಹ ಕಾಯಿಲೆಯಿಂದ ಮೇ 07 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ. ಇನ್ನೊಬ್ಬ 63 ವರ್ಷದ ಮಹಿಳೆ ಮೇ 6 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಮೇ 07 ರಂದು ಮೃತಪಟ್ಟಿದ್ದಾರೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದರಿಂದಾಗಿ ಇದುವರೆಗೂ ಜಿಲ್ಲೆಯಲ್ಲಿ
158 ಜನರು ಸೋಂಕಿಗೆ ಬಲಿಯಾದಂತಾಗಿದೆ.

ಇಂದು 203 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 13192 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 1394 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 195 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!