ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆರಾಯ ಭರ್ಜರಿಯಾಗಿ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಇಂದು ಸೇರಿದಂತೆ ಐದು ದಿನಗಳ ಕಾಲು ಗುಡುಗು -ಸಿಡಿಲು ಸಹಿತ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ರಾಜ್ಯದಲ್ಲಿ ಪೂರ್ವ ಮುಂಗಾರು ಆರಂಭವಾಗಿದೆ. ಮುಂಗಾರು ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಆಗಮಿಸಲಿದೆ. ನೈಋತ್ಯ ಮುಂಗಾರು ಮಾರುತಗಳು ಜೂನ್ ಮೊದಲ ವಾರದಲ್ಲಿ ರಾಜ್ಯವನ್ನು ಪ್ರವೇಶಿಸಲಿವೆ. ಈ ಕಾರಣದಿಂದಾಗಿ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಮತ್ತು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ ಹೂಗ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.