ಗಾಳಿ ಪಟ ಹಾರಿಸಲು ಹೋಗಿದ್ದ ಬಾಲಕ ಕೆರೆಯಲ್ಲಿ ಬಿದ್ದು ಸಾವು!

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಗಾಳಿ ಪಟ ಹಾರಿಸಲು ಹೋಗಿದ್ದ ಬಾಲಕ ಕಾಲು ಜಾರಿ ಕೆರೆಯ ಪಾಲಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಿನ್ನೆ ಸಂಜೆ ಕೆರೆಯ ದಡದಲ್ಲಿ ಬಾಲಕ ಗಾಳಿ ಪಟ ಹಾರಿಸಲು ಹೋಗಿದ್ದ. ಈ ಸಂದರ್ಭದಲ್ಲಿ ಕಾಲು ಜಾರಿ ಕೆರೆಯಲ್ಲಿ ಬಿದ್ದಿದ್ದಾನೆ. ಇಂದು ಶವವಾಗಿ ಪತ್ತೆಯಾಗಿದ್ದಾನೆ.

ಜಿಲ್ಲೆಯ ರೋಣ ತಾಲೂಕಿನ ಕೌಜಗೇರಿ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಭೀರಪ್ಪ ಹನುಮಪ್ಪ ಹೊನ್ನೂರ್(5) ಸಾವನ್ನಪ್ಪಿದ ದುರ್ದೈವಿ ಬಾಲಕ. ಗ್ರಾಮದಲ್ಲಿನ ಕುಡಿಯುವ ನೀರಿನ ಕೆರೆಯಲ್ಲಿಯೇ ಈ ಬಾಲಕ ಬಿದ್ದಿದ್ದಾನೆ.
ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಕನ ಮೃತ ದೇಹವನ್ನು ಸ್ಥಳೀಯರು ಕೆರೆಯಿಂದ ಹೊರ ತೆಗೆದಿದ್ದಾರೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here