HomeBengaluru Newsಗಿಡ ನೆಡುವ ಯೋಜನೆ ವೆಚ್ಚದಲ್ಲಿ ಭ್ರಷ್ಟಾಚಾರ ಆರೋಪ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣಭೈರೇಗೌಡ!

ಗಿಡ ನೆಡುವ ಯೋಜನೆ ವೆಚ್ಚದಲ್ಲಿ ಭ್ರಷ್ಟಾಚಾರ ಆರೋಪ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣಭೈರೇಗೌಡ!

For Dai;y Updates Join Our whatsapp Group

ಬೆಂಗಳೂರು: ನಗರ ಹಸಿರೀಕರಣ ಹಾಗೂ ಗಿಡ ನೆಡುವ ಕಾರ್ಯಕ್ರಮಗಳಲ್ಲಿ ಬಿಬಿಎಂಪಿ ಅಧಿಕಾರಿಗಳು ಅತಿಯಾದ ವೆಚ್ಚ ಮತ್ತು ಅವ್ಯವಹಾರದಲ್ಲಿ ತೊಡಗಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಗಂಭೀರ ಆರೋಪ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಬಿಬಿಎಂಪಿ ವತಿಯಿಂದ ಒಂದು ಗಿಡ ನೆಡಲು ಸುಮಾರು 3,300 ರೂಪಾಯಿ ವೆಚ್ಚವಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದನ್ನು ಉಲ್ಲೇಖಿಸಿದರು. ಅದರಲ್ಲಿ ಕೇವಲ ಗುಂಡಿ ತೋಡಲು 300 ರೂಪಾಯಿ ಮೀಸಲಿಡಲಾಗಿದೆ ಎಂದು ತಿಳಿಸಲಾಗಿದೆ.

ಆದರೆ ತಮ್ಮ ಕ್ಷೇತ್ರದಲ್ಲಿ ನೆಡಲಾದ ಗಿಡಗಳ ಸ್ಥಳ ಪರಿಶೀಲನೆ ಮಾಡಿದಾಗ, ಯಾವುದೇ ಗಿಡಕ್ಕೆ ನಿಯಮಾನುಸಾರ ಗುಂಡಿ ತೋಡಿಲ್ಲ ಎಂದು ಸಚಿವರು ಆರೋಪಿಸಿದ್ದಾರೆ. ಫುಟ್‌ಪಾತ್ ಮತ್ತು ಮೀಡಿಯನ್‌ಗಳಲ್ಲಿ ಮೇಲ್ನೋಟಕ್ಕೆ ಮಾತ್ರ ಗಿಡಗಳನ್ನು ಇರಿಸಲಾಗುತ್ತಿದ್ದು, ನಿಗದಿತ ಮಾನದಂಡಗಳನ್ನು ಪಾಲಿಸಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುಂಡಿ ತೋಡಲು ಮೀಸಲಿಟ್ಟ ಹಣವನ್ನು ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಕಳೆದ 20 ವರ್ಷಗಳಲ್ಲಿ ಬಿಬಿಎಂಪಿ ಮತ್ತು ಹಿಂದಿನ ಬಿಬಿಎಂಪಿ ಎಷ್ಟು ಗಿಡಗಳನ್ನು ನೆಟ್ಟಿದೆ, ಮರಗಣತಿ ಎಷ್ಟು ಬಾರಿ ನಡೆದಿದೆ ಮತ್ತು ನೆಟ್ಟ ಗಿಡಗಳು ನಿಜವಾಗಿ ಉಳಿದಿವೆಯೇ ಎಂಬ ಬಗ್ಗೆ ಸಚಿವರು ಸರಣಿ ಪ್ರಶ್ನೆಗಳನ್ನು ಎತ್ತಿದ್ದಾರೆ.

ಆದರೆ ಈ ಪ್ರಶ್ನೆಗಳಿಗೆ ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗಲಿಲ್ಲ ಎಂದು ಸಚಿವರು ಹೇಳಿದ್ದಾರೆ. ಸಾರ್ವಜನಿಕ ಹಣದ ದುರ್ಬಳಕೆ ಮತ್ತು ನಿರ್ಲಕ್ಷ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಈ ವಿಚಾರದಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆ ಕಡ್ಡಾಯವಾಗಬೇಕು ಎಂದು ಒತ್ತಾಯಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img