ಗುತ್ತಿಗೆದಾರರ ಜೀವ ಉಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಜಿಪಂ ಮಾಜಿ ಸದಸ್ಯೆ!!

0
Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಪ್ರೌಢಶಾಲಾ ಕಟ್ಟಡ ಕಾಮಗಾರಿಯನ್ನು ನಿಗದಿತ ವೇಳೆಗೆ ಪೂರ್ಣಗೊಳಿಸಿದರೂ ಶಿಕ್ಷಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯು, ಕಾಮಗಾರಿ‌‌ ನಿರ್ವಹಿಸಿದ ಗುತ್ತಿಗೆದಾರರಿಗೆ ಹಣ ಪಾವತಿಸದೇ ಸತಾಯಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯಿತಿಯ ಹುಲಿಹೈದರ್ ಕ್ಷೇತ್ರದ ಮಾಜಿ ಸದಸ್ಯೆ ಶಾಂತಾ ರಮೇಶ್ ನಾಯಕ್ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

Advertisement

2018-19ನೇ ಸಾಲಿನ ಅನುದಾನದಡಿ ಜಿಲ್ಲೆಯ ವಿವಿಧೆಡೆ ಪ್ರೌಢಶಾಲಾ ಕಟ್ಟಡಗಳ ನಿರ್ಮಾಣದ ಟೆಂಡರ್ ಪಡೆದ ಗುತ್ತಿಗೆದಾರರು ಕಾಮಗಾರಿ ಮುಗಿಸಿ ಎರಡು ವರ್ಷಗಳಾದರೂ ಶಿಕ್ಷಣ ಶಿಕ್ಷಣ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಕೋಟಿಗಟ್ಟಲೇ ಹಣ ಬಾಕಿ ಉಳಿಸಿಕೊಂಡಿದೆ.

ಕಾಮಗಾರಿ ನಿರ್ವಹಿಸಿದ‌ ಗುತ್ತಿಗೆದಾರರು ಇಲಾಖೆಗೆ ಸಾಕಷ್ಟು ಬಾರಿ ಅಲೆದಾಡಿದರೂ ಅವರಿಗೆ ಸೇರಬೇಕಾದ ಅರ್ಧದಷ್ಟು ಹಣವನ್ನು ನೀಡದೇ ಸತಾಯಿಸುತ್ತಿದೆ. ಆರ್ಥಿಕ ಸಂಕಷ್ಟದಲ್ಲಿರುವ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದೊದಗಿದ್ದು, ಕೂಡಲೇ ಶಿಕ್ಷಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಗೆ ಬಾಕಿ ಹಣ ನೀಡುವಂತೆ ಆದೇಶಿಸಬೇಕೆಂದು ಶಾಂತಾ ರಮೇಶ್ ನಾಯಕ್ ಅವರು, ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.


Spread the love

LEAVE A REPLY

Please enter your comment!
Please enter your name here