ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯಲ್ಲಿ ನಿನ್ನೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿತ್ತು. ಆದರೆ ಮತ್ತೆ ಇವತ್ತು ಇಳಿಕೆ ಕಂಡಿದೆ. ಆದರೆ ಸಾವಿನ ಸರಣಿ ಮುಂದುವರೆದಿದೆ. ಇಂದು 250 ಜನರಿಗೆ ಸೋಂಕು ತಗುಲಿದೆ. ಬುಧವಾರ ಜಿಲ್ಲಾಡಳಿತದ ಮಾಹಿತಿ ಪ್ರಕಾರ ನಾಲ್ವರು ಮೃತಪಟ್ಟಿದ್ದಾರೆ.
ಇಂದಿನ 250 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 24315 ಕ್ಕೆ ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -105, ಮುಂಡರಗಿ-51, ನರಗುಂದ-23, ರೋಣ-21, ಶಿರಹಟ್ಟಿ-41, ಹೊರಜಿಲ್ಲೆಯ-09 ಸೇರಿದಂತೆ 250 ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 262 ಕ್ಕೇರಿದೆ.
ಗದಗನ ಪಂಚಾಕ್ಷರಿ ನಗರದ ನಿವಾಸಿ 62 ವರ್ಷದ ವ್ಯಕ್ತಿ ಮೇ-25 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಜೂನ -02 ರಂದು ಮೃತಪಟ್ಟಿದ್ದಾರೆ.
ಗದಗ ಶಹರದ ನಿವಾಸಿ 62 ವರ್ಷದ ವ್ಯಕ್ತಿ ಮೆ,27 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 31 ರಂದೇ ಮೃತಪಟ್ಟಿದ್ದಾರೆ.
ಜಿಲ್ಲೆಯ ಗಜೇಂದ್ರಗಡ ನಿವಾಸಿ 59 ವರ್ಷದ ಮಹಿಳೆ ಮೇ,28 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೇ, 29 ರಂದು ಮೃತಪಟ್ಟಿದ್ದಾರೆ.
ಗದಗ ಶಹರ ನಿವಾಸಿ 45 ವರ್ಷದ ಮಹಿಳೆ ಮೇ 21 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್- 01 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು 351 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 21835 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 2218 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 185 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.