ವಿಜಯಸಾಕ್ಷಿ ಸುದ್ದಿ, ಪಣಜಿ
ಆಕ್ಸಿಜನ್ ಕೊರತೆಯಿಂದಾಗಿ ಕೇವಲ ನಾಲ್ಕು ದಿನಗಳಲ್ಲಿ ಗೋವಾದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬರೋಬ್ಬರಿ 74 ಜನ ಸಾವನ್ನಪ್ಪಿರುವ ಘಟನೆ ನಡದಿದೆ.
13 ಜನ ಶುಕ್ರವಾರ(ಮೇ.14)ರಂದು ಸಾವನ್ನಪ್ಪಿದ್ದಾರೆ ಎಂದು ಮಾಜಿ ಡಿಸಿಎಂ ವಿಜಯ್ ಸರ್ದೇಸಾಯಿ ಬಹಿರಂಗ ಪಡಿಸಿದ್ದಾರೆ.
ಆಕ್ಸಿಜನ್ ಕೊರತೆಯಿಂದಾಗಿ ಗುರುವಾರವೇ ಬೆಳಿಗ್ಗೆ 15 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಬುಧವಾರ 20 ಜನ ಹಾಗೂ ಮಂಗಳವಾರ 26 ಜನ ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಆಸ್ಪತ್ರೆಗೆ ಭೇಟಿ ನೀಡಿರುವ ಗೋವಾ ಸಿಎಂ ಪ್ರಮೋದ್ ಸಾವಂತ್, ಮೆಡಿಕಲ್ ಆಕ್ಸಿಜನ್ ಲಭ್ಯತೆಯ ಕೊರತೆಯಿಂದ ಈ ದುರ್ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಆಕ್ಸಿಜನ್ ಸರಬರಾಜು ಕೊರತೆ ಇಲ್ಲ. ಮೇ 1ರಿಂದ 10ರ ವರೆಗೆ ರಾಜ್ಯವು ಮಹಾರಾಷ್ಟ್ರದ ಕೊಲ್ಹಾಪುರದಿಂದ ನಿಗದಿಪಡಿಸಿದ್ದ 110 ಮೆಟ್ರಿಕ್ ಟನ್ ಗಳಲ್ಲಿ ಕೇವಲ 66.74 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ ಪಡೆದಿರುವುದಾಗಿ ಕೂಡ ಗೋವಾ ಸರ್ಕಾರ ಹೇಳಿದೆ.