–ಪೊಲೀಸರಿಗೆ ಗೃಹಸಚಿವ ಅರಗ ಜ್ಞಾನೇಂದ್ರ ಸೂಚನೆ
ವಿಜಯಸಾಕ್ಷಿ ಸುದ್ದಿ, ಉಡುಪಿ
ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ವಿಫಲ ಆಗಿಲ್ಲ. ವಿಫಲವಾಗಲು ಪೊಲೀಸರು ಬಿಡಬಾರದು. ಗೋಸಾಗಣೆ, ಗೋಹತ್ಯೆ ಸಂಪೂರ್ಣ ನಿಲ್ಲಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋಹತ್ಯೆ ಹೆಚ್ಚಳದಿಂದ ಸಾಮಾಜಿಕ ಅಶಾಂತಿಗೂ ಕಾರಣವಾಗಿದೆ. ಅಕ್ರಮ ಗೋಸಾಗಣೆ, ಗೋಹತ್ಯೆ ಸಂಪೂರ್ಣ ನಿಲ್ಲಿಸಬೇಕು. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಸಚಿವರು ಹೇಳಿದರು.
ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ 16 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದು, ತನಿಖೆ ವೇಗವಾಗಿ ನಡೆದಿದೆ. ಬಿಗಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ನಾವು ಅತ್ಯಾಚಾರ ಪ್ರಕರಣ ಸಹಿಸುವುದಿಲ್ಲ ಎಂದು ಹೇಳಿದರು.